ಮಹಾರಾಷ್ಟ್ರ: ಮುಸ್ಲಿಮರಿಗೆ ಮೀಸಲಾತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಐಎಂಐಎಂ

ಮಹಾರಾಷ್ಟ್ರ ಸರ್ಕಾರ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲು ನಿರ್ಧರಿಸಿದ ಬೆನ್ನಲ್ಲೇ, ಮೀಸಲಾತಿ ಬೇಕು ಎಂದು ಎಐಎಂಐಎಂ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಮುಂಬೈ: ಮಹಾರಾಷ್ಟ್ರ ಸರ್ಕಾರ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲು ನಿರ್ಧರಿಸಿದ ಬೆನ್ನಲ್ಲೇ, ಮೀಸಲಾತಿ ಬೇಕು ಎಂದು ಎಐಎಂಐಎಂ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದೆ.
ಮರಾಠರಿಗೆ ಮೀಸಲಾತಿ ನೀಡುತ್ತಿರುವುದನ್ನು ನಾವು ಪ್ರಶ್ನಿಸುವುದಿಲ್ಲ. ಆದರೆ ಮುಸ್ಲಿಮರಿಗೂ ಮೀಸಲಾತಿ ಬೇಕು ಎಂದು ಎಐಎಂಐಎಂ ಮುಖಂಡ ಇಮ್ತಿಯಾಜ್ ಜಲಿಲ್ ಅವರು ಎಎನ್ ಐಗೆ ತಿಳಿಸಿದ್ದಾರೆ.
ಇನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಹ ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ
ಮರಾಠ ಸಮುದಾಯದಂತೆಯೇ ನಮ್ಮಲ್ಲಿಯೂ ಬಡತನವಿದೆ. ಮುಸ್ಲಿಮರು ಹಲವು ವರ್ಷಗಳಿಂದ ಕಡು ಬಡತನದಲ್ಲಿ ಬದುಕುತ್ತಿದ್ದಾರೆ. ನಮ್ಮ ಸಮುದಾಯದ ಅಭಿವೃದ್ದಿಗಾಗಿ ವಿಶೇಷ ಮೀಸಲಾತಿ ಸೌಲಭ್ಯ ನೀಡಬೇಕು. ಮೀಸಲಾತಿಗೆ ನಮ್ಮ ಇಡೀ ಸಮುದಾಯ ಅರ್ಹವಾಗಿದೆ. ಇತರೆ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಿದಂತೆಯೇ, ನಮಗೂ ಪ್ರಾಮುಖ್ಯತೆ ಕೊಡಬೇಕೆಂದು ಅಸಾದುದ್ದೀನ್​​ ಓವೈಸಿ ಹೇಳಿದ್ದಾರೆ.
ನಿನ್ನೆಯಷ್ಟೆ ಮಹಾರಾಷ್ಟ್ರ ಸರ್ಕಾರ ಮರಾಠರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.16 ಮೀಸಲಾತಿ ನೀಡುವ ಮಸೂದೆಯನ್ನು ವಿಧಾನಸಭೆಯಲ್ಲಿ ಆಂಗೀಕರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com