ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಕಿಸಾನ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಎಚ್ ಡಿ ದೇವೇಗೌಡ ಅವರು, 'ನಾವು ರೈತರ ಜೊತೆ ಇದ್ದೇವೆ. ರೈತರು ಬರ, ಬೆಳೆಗೆ ಉತ್ತಮ ಬೆಲೆಯಿಲ್ಲದೆ ಪರದಾಡುತ್ತಿದ್ದರೆ ಕೇಂದ್ರ ಸರ್ಕಾರ ಆ ಕಡೆಗೆ ಗಮನವನ್ನೇ ಹರಿಸುತ್ತಿಲ್ಲ. ರೈತರ ಕೂಗಿಗೆ ಬೆಲೆಯೇ ಇಲ್ಲದಂತಾಗಿದೆ. ರೈತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಯೋಚಿಸುತ್ತಿಲ್ಲ. ಆದರೆ, ಆ ಎಲ್ಲ ರೈತರ ಜೊತೆಯಲ್ಲಿ ನಾವಿದ್ದೇವೆ. ಬಿಜೆಪಿ ಹೊರತುಪಡಿಸಿ ಉಳಿದೆಲ್ಲ ಪಕ್ಷಗಳ ನಾಯಕರೂ ನಿಮ್ಮ ಜೊತೆಗಿದ್ದೇವೆ ಎಂದು ರೈತರಿಗೆ ಭರವಸೆ ನೀಡಿದರು.