ಆರೋಗ್ಯ ವಿಮೆಯ ಮೊತ್ತ 5 ಲಕ್ಷ ರು.ಗೆ ಹೆಚ್ಚಿಸಿದ ತಮಿಳುನಾಡು ಸರ್ಕಾರ

ತಮಿಳುನಾಡು ಸರ್ಕಾರ ಅರೋಗ್ಯ ವಿಮೆಯ ಮೊತ್ತವನ್ನು 2 ಲಕ್ಷ ರುಪಾಯಿಯಿಂದ 5 ಲಕ್ಷ ರುಪಾಯಿಗೆ ಹೆಚ್ಚಿಸಿದ್ದು, ರಾಜ್ಯದ 1.58 ಕೋಟಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚೆನ್ನೈ: ತಮಿಳುನಾಡು ಸರ್ಕಾರ ಅರೋಗ್ಯ ವಿಮೆಯ ಮೊತ್ತವನ್ನು 2 ಲಕ್ಷ ರುಪಾಯಿಯಿಂದ 5 ಲಕ್ಷ ರುಪಾಯಿಗೆ ಹೆಚ್ಚಿಸಿದ್ದು, ರಾಜ್ಯದ 1.58 ಕೋಟಿ ಕುಟುಂಬಗಳು ಇದರ ಲಾಭ ಪಡೆಯಲಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ಆರೋಗ್ಯ ವಿಮೆಯ ಫಲಾನುಭವಿಗಳ ಮನವಿಗೆ ಸ್ಪಂದಿಸಿ ವಿಮಾ ಮೊತ್ತವನ್ನು 2 ಲಕ್ಷದಿಂದ 5 ಲಕ್ಷ ರುಪಾಯಿಗೆ ಹೆಚ್ಚಿಸಲಾಗಿದೆ ಎಂದು ಪಳನಿಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 26.96 ಲಕ್ಷ ಮಂದಿ ಆರೋಗ್ಯ ವಿಮೆಯ ಸೌಲಭ್ಯ ಪಡೆದಿದ್ದಾರೆ ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.
ಈ ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಆರೋಗ್ಯ ವಿಮೆಯನ್ನು 2011ರಲ್ಲಿ ಎಐಎಡಿಎಂಕೆ ಅಧಿಕಾರಕ್ಕೆ ಬಂದ ನಂತರ ಅದನ್ನು ಮತ್ತಷ್ಟು ವಿಸ್ತರಿಸಲಾಯಿತು. 2 ಲಕ್ಷ ರುಪಾಯಿಯ ಆರೋಗ್ಯ ವಿಮೆಯ ಸೌಲಭ್ಯ ಪಡೆಯಲು ತಮಿಳುನಾಡಿನ 1.58 ಕೋಟಿ ಕುಟುಂಬಗಳಿಗೆ ಆರೋಗ್ಯ ವಿಮೆ ಕಾರ್ಡ್ ವಿತರಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com