ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೌಲಭ್ಯ ಕಲ್ಪಿಸುವ ವಿಷಯವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆ ನಡೆದಿದೆ. ಮಹಿಳೆಯರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ, ಆದರೆ ದೇವಾಲಯದಲ್ಲಿ ಮಹಿಳೆಯರಿಗೆಂದೇ ಪ್ರತ್ಯೇಕ ಸರತಿ ಸಾಲು ವ್ಯವಸ್ಥೆ ಮಾಡುವುದು ಅಪ್ರಾಯೋಗಿಕ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.