'ಕಿಸಾನ್ ಕ್ರಾಂತಿ ಪಾದಯಾತ್ರೆ': ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜಧಾನಿ ದೆಹಲಿಯತ್ತ ಪ್ರವೇಶಿಸಿದ್ದ ಕಿಸಾನ್ ಕ್ರಾಂತಿ ಪಾದಯಾತ್ರೆಯನ್ನು ದೆಹಲಿ ಪೊಲೀಸರು...
'ಕಿಸಾನ್ ಕ್ರಾಂತಿ ಪಾದಯಾತ್ರೆ': ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗಿಸಿದ ಪೊಲೀಸರು
'ಕಿಸಾನ್ ಕ್ರಾಂತಿ ಪಾದಯಾತ್ರೆ': ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗಿಸಿದ ಪೊಲೀಸರು
ನವದೆಹಲಿ: ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜಧಾನಿ ದೆಹಲಿಯತ್ತ ಪ್ರವೇಶಿಸಿದ್ದ ಕಿಸಾನ್ ಕ್ರಾಂತಿ ಪಾದಯಾತ್ರೆಯನ್ನು ದೆಹಲಿ ಪೊಲೀಸರು ತಡೆದಿದ್ದು, ರೈತರನ್ನು ಚದುರಿಸುವ ಸಲುವಾಜಿ ಜಲಫಿರಂಗು ಹಾಗೂ ಅಶ್ರುವಾಯು ಪ್ರಯೋಗ ನಡೆಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಉತ್ತಪ್ರದೇಶ, ಪಂಜಾಬ್ ಹಾಗೂ ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳಿಂದ ಸುಮಾರು 60 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗವಿಸಿದ್ದು, ರೈತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. 
ಪೊಲೀಸರು ಜಲಫಿರಂಗಿಗೆ ಬಗ್ಗದ ರೈತರು ಟ್ರಾಕ್ಟರ್, ಎತ್ತಿನಗಾಡಿಗಳ ಮೂಲಕ ಬ್ಯಾರಿಕೇಡ್ ಗಳನ್ನು ತಳ್ಳಿ ಒಳನುಗ್ಗಲು ಯತ್ನಿಸಿದ್ದಾರೆ. 
ಇದೇ ವೇಳೆ ರೈತರ ಪ್ರತಿಭಟನೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬೆಂಬಲ ನೀಡಿದ್ದು, ದೆಹಲಿ ಪ್ರವೇಶಿಸಲು ರೈತರಿಗೆ ಅವಕಾಶ ಮಾಡಿಕೊಡಬೇಕು. ಅವರನ್ನೇಕೆ ದೆಹಲಿ ಪ್ರವೇಶಿಸಲು ನಿರಾಕರಿಸಲಾಗುತ್ತಿದೆ? ಇದು ತಪ್ಪು. ನಾವು ರೈತರ ಪರವಾಗಿದ್ದೇವೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com