ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ ವಿರೋಧಿ : ಯೆಚೂರಿ

ರಾಜಧಾನಿ ದೆಹಲಿಯತ್ತ ಪ್ರವೇಶಿಸಿದ್ದ ಕಿಸಾನ್ ಕ್ರಾಂತಿ ಪಾದಯಾತ್ರೆಯನ್ನು ತಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ವಾಗ್ದಾಳಿ ನಡೆಸಿದ್ದಾರೆ.
ಸೀತಾರಾಂ ಯೆಚೂರಿ
ಸೀತಾರಾಂ ಯೆಚೂರಿ

ನವದೆಹಲಿ:  ರಾಜಧಾನಿ ದೆಹಲಿಯತ್ತ ಪ್ರವೇಶಿಸಿದ್ದ ಕಿಸಾನ್ ಕ್ರಾಂತಿ ಪಾದಯಾತ್ರೆಯನ್ನು ತಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಸಿಪಿಐ (ಎಂ)  ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ವಾಗ್ದಾಳಿ ನಡೆಸಿದ್ದಾರೆ.

 ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ಅವರು, ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸದ ಮೋದಿ ಸರ್ಕಾರ ರೈತರ ವಿರೋಧಿಯಾಗಿದೆ. ಸಾಲ ತೀರಿಸಲಾಗಿದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸ್ವಾತಂತ್ರ್ಯ ನಂತರ ರೈತರು ಇಂತಹ ಸಂಕಷ್ಟ  ಅನುಭವಿಸಿದ್ದನ್ನು ನಾನು ನೋಡಿಯೇ ಇಲ್ಲ  ಎಂದು ಹೇಳಿದರು.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜಿವಾಲಾ ಹೇಳಿದಂತೆ  ಮೋದಿ ಸರ್ಕಾರ ಸ್ವಾತಂತ್ರ್ಯ ಪೂರ್ವದಲ್ಲಿದ್ದ ಬ್ರಿಟಿಷರ ಸರ್ಕಾರದಂತೆ ಆಳ್ವಿಕೆ ನಡೆಸುತ್ತಿದೆ ಎಂದು ಯೆಚೂರಿ ಆರೋಪಿಸಿದರು. ಸ್ವಾತಂತ್ರ್ಯ ಬರುವುದಕ್ಕೆ ಮುಂಚೆ ಬ್ರಿಟಿಷರು ರೈತರನ್ನು ಶೋಷಣೆಗೊಳಪಡಿಸುತ್ತಿದ್ದರು. ಈಗ ಮೋದಿ ಸರ್ಕಾರ ರೈತರ ಮೇಲೆ ಜಲ ಫಿರಂಗು ಹಾಗೂ ಆಶ್ರುವಾಯು ಸಿಡಿಸಿದೆ ಎಂದರು.

 ಮಾಜಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೂಡಾ ರೈತರನ್ನು ಬೆಂಬಲಿಸಿದ್ದು, ಕೇಂದ್ರಸರ್ಕಾರದ  ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಮೋದಿ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಫವಿಫಲವಾಗಿದ್ದು, ಇದೊಂದು ದುರದೃಷ್ಟಕರ ಸಂಗತಿಯಾಗಿದ್ದು, ರೈತರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com