ನಾಲ್ವರೊಂದಿಗೆ ಮೂರ್ತಿಯವರು ಕ್ಯಾಲಿಫೋರ್ನಿಯಾದಿಂದ ಅಲಸ್ಕಾಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ಬಳಿಕ ಕಾರಿನಲ್ಲಿದ್ದ ನಾಲ್ವರು ಹಾಗೂ ಮೂರ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.