ರುಪಾಯಿ ಮೌಲ್ಯ ಕುಸಿಯುತ್ತಿಲ್ಲ ಆದರೆ, ಕುಸಿಯುವಂತೆ ಮಾಡಲಾಗಿದೆ: ರಾಹುಲ್ ಗಾಂಧಿ

ಭಾರತದ ರುಪಾಯಿ ಮೌಲ್ಯ ಕುಸಿಯುತ್ತಿಲ್ಲ. ಆದರೆ, ಕುಸಿಯುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ...
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ: ಭಾರತದ ರುಪಾಯಿ ಮೌಲ್ಯ ಕುಸಿಯುತ್ತಿಲ್ಲ. ಆದರೆ, ಕುಸಿಯುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಹೇಳಿದ್ದಾರೆ. 
ಡಾಲರ್ ಎದುರು ರುಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದ್ದು, ಈ ಇಳಿಕೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಕಂಗಾಲಾಗುವಂತೆ. ಷೇರು ಮಾರುಕಟ್ಟೆ 604 ಅಂಕಗಳ ಕುಸಿತದೊಂದಿಗೆ ಆರಂಭವಾಗಿದ್ದು, ದಿನದ ವಹಿವಾಟು ಆರಂಭವಾದಾಗ 73.34 ಆಗಿದ್ದ ರುಪಾಯಿ ಮೌಲ್ಯ ಕೆಲವೇ ಹೊತ್ತಿನಲ್ಲಿ 73.77ಕ್ಕೆ ತಲುಪಿದೆ. 
ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ದ ತೀವ್ರವಾಗಿ ಕಿಡಿಕಾರಿದ್ದಾರೆ. 
ಭಾರತೀಯ ರುಪಾಯಿ ಮೌಲ್ಯ ಕುಸಿತ ಕಂಡಿಲ್ಲ. ಆದರೆ, ಕುಸಿಯುವಂತೆ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com