ಪುಟಿನ್-ಮೋದಿ
ದೇಶ
ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಆಗಮನ, ಮೋದಿ, ಸುಷ್ಮಾ ಭೇಟಿ, ಔತಣಕೂಟದಲ್ಲಿ ಭಾಗಿ
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅ.04 ರಂದು ಭಾರತಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಇಲಾಖೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ.
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅ.04 ರಂದು ಭಾರತಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಇಲಾಖೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ.
ಅ.05 ರಂದು ರಷ್ಯಾ-ಭಾರತದ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದು, ಬಹುನಿರೀಕ್ಷಿತ ಎಸ್-400 ಕ್ಷಿಪಣಿ ವ್ಯವಸ್ಥೆ ಖರೀದಿ ಒಪ್ಪಂದಕ್ಕೆ ಉಭಯ ರಾಷ್ಟ್ರಗಳೂ ಸಹಿ ಹಾಕುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅ.05 ರಂದು ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ರಷ್ಯಾ ಅಧ್ಯಕ್ಷ ಪುಟಿನ್ ರನ್ನು ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ, "ಪ್ರೆಸಿಡೆಂಟ್ ಪುಟಿ, ಭಾರತಕ್ಕೆ ಸ್ವಾಗತ, ರಷ್ಯಾ-ಭಾರತ ಸ್ನೇಹವನ್ನು ವೃದ್ಧಿಸುವ ದ್ವಿಪಕ್ಷೀಯ ಮಾತುಕತೆಯನ್ನು ಎದುರು ನೋಡುತ್ತಿದ್ದೇವೆ" ಎಂದು ಟ್ವೀಟ್ ಮಾಡಿ ಪುಟಿನ್ ಅವರನ್ನು ಸ್ವಾಗತಿಸುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.
ಇದಕ್ಕೂ ಮುನ್ನ ರಷ್ಯಾ ಅಧ್ಯಕ್ಷರನ್ನು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಸ್ವಾಗತಿಸಿದ್ದರು. ವ್ಲಾದಿಮಿರ್ ಪುಟಿನ್ ಮೋದಿ ಅವರೊಂದಿಗೆ ಔತಣ ಕೂಟದಲ್ಲಿ ಭಾಗಿಯಾಗಿದ್ದು, ಅಮೆರಿಕ ಎಚ್ಚರಿಕೆ ಹೊರತಾಗಿಯೂ ರಷ್ಯಾದಿಂದ ಕ್ಷಿಪಣಿ ವ್ಯವಸ್ಥೆ ಖರೀದಿಸುವ ಒಪ್ಪಂದದ ದೃಷ್ಟಿಯಿಂದ ನಾಳೆಯ ದ್ವಿಪಕ್ಷೀಯ ಮಾತುಕತೆ ಮಹತ್ವ ಪಡೆದುಕೊಂಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ