ಟೆಲಿಗ್ರಾಫ್ ಪತ್ರಿಕೆಯಲ್ಲಿ ಪತ್ರಕರ್ತರಾಗಿರುವ ಅಮಿತ್ ಭೆಲಾರಿ, ಲಾಲು ಪ್ರಸಾದ್ ಯಾದವ್ ಹಾಗೂ ಆರ್ ಜೆಡಿ ಬಗ್ಗೆ ವರದಿ ಪ್ರಕಟಿಸಿದ್ದಕ್ಕಾಗಿ ತಮಗೆ ಜೀವ ಬೆದರಿಕೆ ಬಂದಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅ.04 ರಂದು ಅನಾಮಿಕ ವ್ಯಕ್ತಿಯೊಬ್ಬರು ತಮಗೆ ಕರೆ ಮಾಡಿ ಅಸಭ್ಯ ಭಾಷೆಯಲ್ಲಿ ಮಾತನಾಡುವುದೂ ಅಲ್ಲದೇ ಗುಂಡಿಕ್ಕಿ ಹತ್ಯೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.