ಈ ಮಧ್ಯೆ, ಐದು ರಾಜ್ಯಗಳಲ್ಲಿ ಸದ್ಯವೇ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಅಲ್ಪ ಇಳಿಸಿರುವುದು ಚುನಾವಣಾ ಗಿಮಿಕ್ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ. ಅಲ್ಲದೆ ಸರ್ಕಾರದ ಈ ಕ್ರಮವು ಜನರ ಮರಣ ದಂಡನೆ ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ ಹಾಗೆ ಆಗಿದೆ ಎಂದು ಲೇವಡಿ ಮಾಡಿದ್ದಾರೆ.