ಬಿಜೆಪಿಯ ತಂತ್ರಗಳು ಪಶ್ಚಿಮ ಬಂಗಾಳದಲ್ಲಿ ನಡೆಯುವುದಿಲ್ಲ, ಬಿಜೆಪಿಗೆ ಒಂದೇ ಒಂದು ಸ್ಥಾನವನ್ನು ಗೆಲ್ಲುವುದಕ್ಕೂ ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ. ಇದೇ ವೇಳೆ ಮಧ್ಯಪ್ರದೇಶ, ರಾಜಸ್ಥಾನ, ಚತ್ತೀಸ್ ಗಢ ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್ ಪಿ ನಾಯಕಿ ಮಾಯಾವತಿ ಕಾಂಗ್ರೆಸ್ ಜೊತೆ ಮೈತ್ರಿಗೆ ನಿರಾಕರಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡುವುದಕ್ಕೆ ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ಇದೇ ವೇಳೆ ಜನವರಿ19 ಕ್ಕೆ ನಡೆಯಲಿರುವ ಟಿಎಂಸಿ ಪಕ್ಷದ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರು ಹಾಗೂ ಮಾಯಾವತಿ ಇಬ್ಬರನ್ನೂ ಆಹ್ವಾನಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.