ಸುದ್ದಿಗೋಷ್ಠಿ ಮುಂದೂಡಿಕೆ: ಚುನಾವಣೆ ಆಯೋಗ ಪ್ರಧಾನಿ ಮೋದಿ ಕೈಗೊಂಬೆ ಎಂದು ಕಾಂಗ್ರೆಸ್ ಟೀಕೆ

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು ಆಯೋಗ ಕರೆದಿದ್ದ ಸುದ್ದಿಗೋಷ್ಠಿ ಮುಂದೂಡಿದ್ದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತ ...
ನರೇಂದ್ರ ಮೋದಿ
ನರೇಂದ್ರ ಮೋದಿ
ಕೋಲ್ಕೊತಾ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು ಆಯೋಗ ಕರೆದಿದ್ದ ಸುದ್ದಿಗೋಷ್ಠಿ ಮುಂದೂಡಿದ್ದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತ ಪಡಿಸಿದೆ. 
ನವದೆಹಲಿಯ ಚುನಾವಣಾ ಆಯೋಗ ಕಚೇರಿಯಲ್ಲಿ ಮದ್ಯಾಹ್ನ 12.30 ಕ್ಕೆ ಸುದ್ದಿಗೋಷ್ಠಿ ಮಾಡಲು ನಿರ್ಧರಿಸಿತ್ತು. ಐದು ರಾಜ್ಯಗಳಾದ ಮಧ್ಯಪ್ರದೇಶ, ಛತ್ತಿಸ್​ಘಡ, ರಾಜಸ್ಥಾನ್, ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆ ಮತ್ತು ಕರ್ನಾಟಕದ ರಾಮನಗರ ಹಾಗೂ ಜಮಖಂಡಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕವನ್ನು ನಿಗದಿ ಮಾಡಿ, ಘೋಷಣೆ ಮಾಡಲು ನಿರ್ಧರಿಸಿತ್ತು, ಆದರೆ 12.30ಕ್ಕೆ ಇದ್ದ ಸುದ್ದಿಗೋಷ್ಠಿಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ರಾಜಸ್ಥಾನದಲ್ಲಿ ಪ್ರಧಾನಿ ಮೋದಿ ರ್ಯಾಲಿ ಇರುವ ಕಾರಣಕ್ಕೆ ಮುಂದೂಡಿದೆ. ಚುನಾವಣಾ ಆಯೋಗ ಪ್ರಧಾನಿ ನಿಯಂತ್ರಣದಲ್ಲಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಆರೋಪ ಮಾಡಿದ್ದಾರೆ.
ರಾಜಸ್ಥಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಮೋದಿ ಅವರ ರ್ಯಾಲಿ ಇದ್ದು, ಒಂದು ವೇಳೆ ಚುನಾವಣೆ ದಿನಾಂಕ ಘೋಷಣೆಯಾದರೆ, ನೀತಿ ಸಂಹಿತೆ ಜಾರಿಯಾಗುತ್ತದೆ. ಆಗ ಮೋದಿ ಅವರ ರ್ಯಾಲಿ ರದ್ದಾಗುತ್ತದೆ. ಇದೇ ಕಾರಣದಿಂದ ಸುದ್ದಿಗೋಷ್ಠಿಯನ್ನು ಮುಂದೂಡಲಾಗಿದೆ ಎಂದು ಸುರ್ಜೆವಾಲಾ ಆರೋಪ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com