ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ಬಸ್; 15 ಜನರ ಸಾವು, 19 ಮಂದಿಗೆ ಗಾಯ
ಜಮ್ಮುವಿನ ಶ್ರೀನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 15 ಮಂದಿ ಸಾವನ್ನಪ್ಪಿ, 19 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ...
ಶ್ರೀನಗರ: ಜಮ್ಮುವಿನ ಶ್ರೀನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 15 ಮಂದಿ ಸಾವನ್ನಪ್ಪಿ, 19 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಕೆಲ ಮೊತ್ ಬಳಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. 8 ಗಾಯಾಳುಗಳನ್ನು ಹೆಲಿಕಾಪ್ಟರ್ ಗಳ ಮೂಲಕ ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
35ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತಿದ್ದ ಮಿನಿ ಬಸ್ ಬಿನಿಹಾಲ್ ನಿಂದ ರಂಬಾನಿಗೆ ತೆರಳುತ್ತಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ.
ಶೋಪಿಯಾನ್ ಜಿಲ್ಲೆಯಲ್ಲಿ ಭೀಕರ ಅಪಘಾತ: 16 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 16 ಯೋಧರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಕನಿಪೋರ ಗ್ರಾಮದಲ್ಲಿ ವಾಹನ ಮಗುಚಿ ಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ. ಎಲೈಟ್ ಪ್ಯಾರಾ-ಕಮಾಂಡೋ ಪಡೆಗೆ ಸೇರಿದ 16 ಯೋಧರು ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.