

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿದ ಆಯುಷ್ಮನ್ ಭಾರತ್- ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಮೊದಲ ಬಾರಿಗೆ ಚಿಕಿತ್ಸೆ ಪಡೆಯಲು ಆಧಾರ್ ಕಡ್ಡಾಯವೇನಿಲ್ಲ. ಆದರೆ, ಎರಡನೇ ಬಾರಿಗೆ ಚಿಕಿತ್ಸೆ ಪಡೆಯುವವರಿಗೆ ಆಧಾರ್ ಕಡ್ಡಾಯವಾಗಿರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಒಂದು ವೇಳೆ ಆಧಾರ್ ಸಂಖ್ಯೆ ಇಲ್ಲದಿದ್ದರೆ, ಆಧಾರ್ ನೋಂದಣಿ ಮಾಡಿಸಿರುವ ಬಗ್ಗೆ ಸಂಬಂಧಿಸಿದ ದಾಖಲೆಗಳನ್ನು ಫಲಾನುಭವಿಗಳು ನೀಡಬೇಕಾಗುತ್ತದೆ ಎಂದು ಯೋಜನೆ ಅನುಷ್ಠಾನದ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಆರೋಗ್ಯ ಏಜೆನ್ಸಿಯ ಸಿಇಓ ಇಂದೂ ಭೂಷಣ್ ತಿಳಿಸಿದ್ದಾರೆ.