ಮೂರು ವರ್ಷಗಳಲ್ಲಿ ಎಡಪಂಥೀಯ ಭಯೋತ್ಪಾದನೆ ಅಂತ್ಯ: ರಾಜನಾಥ್ ಸಿಂಗ್

ದೇಶದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಎಡಪಂಥೀಯ ಭಯೋತ್ಪಾದನೆಯನ್ನು ಸಂಪೂರ್ಣ ಮಟ್ಟ ಹಾಕಲಾಗುವುದು...
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
ಲಖನೌ: ದೇಶದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಎಡಪಂಥೀಯ ಭಯೋತ್ಪಾದನೆಯನ್ನು ಸಂಪೂರ್ಣ ಮಟ್ಟ ಹಾಕಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಹೇಳಿದ್ದಾರೆ.
ರ್ಯಾಪಿಡ್ ಆಕ್ಷನ್ ಫೋರ್ಸ್(ಆರ್ ಎಎಫ್)ನ 26ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ನಮ್ಮ ಕ್ರಿಯೆ ಕೂಡ ಕ್ಷಿಪ್ರವಾಗಿಬೇಕು ಮತ್ತು ತ್ವರಿತವಾಗಿರಬೇಕು. ಆದರೆ ಯಾವತ್ತೂ ಮೈಮರೆಯಬಾರದು ಎಂದರು.
ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಈಗ 10 ರಿಂದ 12ಕ್ಕೆ ಇಳಿದಿದೆ. ಈ ಹಿಂದೆ 126 ಜಿಲ್ಲೆಗಳು ನಕ್ಸಲ್ ಪೀಡಿತವಾಗಿದ್ದವು. ನಿಮ್ಮ ಹಾಗೂ ರಾಜ್ಯ ಪೊಲೀಸ್ ಪಡೆಗಳ ಕಠಿಣ ಶ್ರಮದಿಂದ  ಮುಂದಿನ ಎರಡ್ಮೂರು ವರ್ಷಗಳಲ್ಲಿ ಭಾರತ ಸಂಪೂರ್ಣ ನಕ್ಸಲ್ ಮುಕ್ತವಾಗಲಿದೆ ಎಂದರು.
ಭದ್ರತಾ ಪಡೆಗಳು ಈ ವರ್ಷ 131 ನಕ್ಸಲರನ್ನು ಮತ್ತು ಉಗ್ರರನ್ನು ಹತ್ಯೆ ಮಾಡಿವೆ ಮತ್ತು ಇದೇ ವೇಳೆ 58 ಮಾವೋವಾದಿಗಳು ಶರಣಾಗಿದ್ದಾರೆ ಎಂದು ಸಚಿವರು ತಿಳಿಸಿದರು.
ದೇಶದಲ್ಲಿ ಎಡ ಪಂಥೀಯ  ಹಿಂಸಾಚಾರವನ್ನು ಮಟ್ಟ ಹಾಕಲು ಕೇಂದ್ರ ಮೀಸಲು ಹಾಗೂ  ರಾಜ್ಯ ಪೊಲೀಸ್‌ ಪಡೆಗಳು ಮಾಡುತ್ತಿರುವ ಅತ್ಯುತ್ತಮ ಕೆಲಸವನ್ನು ಶ್ಲಾಘಿಸುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com