ದೇಶ

ಸುಪೌಲ್ ಕೀಚಕ ಕೃತ್ಯ : 9 ಮಂದಿ ಬಂಧನ, ಬಿಹಾರ ಸರ್ಕಾರವನ್ನು ಕುಂಬಕರ್ಣನಿಗೆ ಹೋಲಿಸಿದ ಆರ್ ಜೆಡಿ

ಬಿಹಾರದ ಸುಪೌಲ್ ನಲ್ಲಿ 30 ಶಾಲಾ ವಿದ್ಯಾರ್ಥಿನಿಯರ ಮೇಲಿನ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುಪೌಲ್ ಕೀಚಕ ಕೃತ್ಯ  : 9 ಮಂದಿ ಬಂಧನ, ಬಿಹಾರ ಸರ್ಕಾರವನ್ನು ಕುಂಬಕರ್ಣನಿಗೆ ಹೋಲಿಸಿದ ಆರ್ ಜೆಡಿ
ಜೈ ಪ್ರಕಾಶ್ ನಾರಾಯಣ್ ಯಾದವ್ , ಡಾ. ಸುನೀಲ್ ಕುಮಾರ್
Published On :
ನವದೆಹಲಿ : ಬಿಹಾರದ ಸುಪೌಲ್ ನಲ್ಲಿ 30 ಶಾಲಾ ವಿದ್ಯಾರ್ಥಿನಿಯರ ಮೇಲಿನ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಅಪ್ರಾಪ್ತ ಬಾಲಕ ಸೇರಿದಂತೆ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 
ಕೆಲ ಯುವಕರಿಂದ  ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಈ ಪ್ರಕರಣದಲ್ಲಿ ಮುಗ್ದರನ್ನು ಸಿಲುಕಿಸುವುದಿಲ್ಲ. ತನಿಖೆ ನಡೆಯುತ್ತಿದೆ ಎಂದು ತ್ರಿವೇಣಿಗಂಜ್ ಜಿಲ್ಲೆಯ ಸಹಾಯಕ ಪೊಲೀಸ್ ಸೂಪರಿಂಟೆಂಡೆಂಟ್   ತಿಳಿಸಿದ್ದಾರೆ.
ಸುಪೌಲ್ ಪ್ರಕರಣದಿಂದ ಬಿಹಾರ ರಾಜ್ಯ ಮತ್ತೆ ತಲೆ ತಗ್ಗಿಸುವಂತಾಗಿದೆ. ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಪದೇ ಪದೇ ಮರುಕಳಿಸುತ್ತಲೇ ಇದ್ದು,  ಸರ್ಕಾರ ಕುಂಬಕರ್ಣನಂತೆ ನಿದ್ರೆ ಮಾಡುತ್ತಿದೆ ಎಂದು ಯುಎನ್ ಐ ಸುದ್ದಿಸಂಸ್ಥೆ ಜೊತೆ ಮಾತನಾಡುತ್ತಾ ಹೇಳಿದರು.
ಸಂತ್ರಸ್ತೆಯರು ನೀಡಿರುವ ಹೇಳಿಕೆ ಪ್ರಕಾರ, ಶನಿವಾರ ಯುವಕನೋರ್ವ ಶಾಲೆಯ ಗೋಡೆಯ ಮೇಲೆ ಅಸಭ್ಯವಾಗಿ ಬರಹ ಬರೆಯುತ್ತಿದ್ದ. ಇದನ್ನು ನೋಡಿನ್ನು ನೋಡಿದ ವಿದ್ಯಾರ್ಥಿನಿ ಯುವಕನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಳು.
ಕೆಲ ಸಮಯದ ಬಳಿಕ ಸ್ಥಳಕ್ಕೆ ಬಂದಿರುವ ಯುವಕರ ಗುಂಪು ಶಾಲೆಯ ಮೇಲೆ ದಾಳಿ ನಡೆಸಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಾಲಕಿಯರು ಹಾಗೂ ಯುವಕರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಹಲವು ವಿದ್ಯಾರ್ಥಿನಿಯರು ತೀವ್ರವಾಗಿ ಗಾಯಾಗೊಂಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.