ರಾಯ್'ಬರೇಲಿ ರೈಲು ದುರಂತ: ಮೃತರ ಕುಟುಂಬಕ್ಕೆ ರೂ.5 ಪರಿಹಾರ, ತನಿಖೆಗೆ ಆದೇಶಿಸಿದ ಸರ್ಕಾರ

ಉತ್ತರಪ್ರದೇಶದ ರಾಯ್'ಬರೇಲಿಯಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಣೆ ಮಾಡಿದ್ದಾರೆ...
ರಾಯ್'ಬರೇಲಿ ರೈಲು ದುರಂತ
ರಾಯ್'ಬರೇಲಿ ರೈಲು ದುರಂತ
ರಾಯ್'ಬರೇಲಿ: ಉತ್ತರಪ್ರದೇಶದ ರಾಯ್'ಬರೇಲಿಯಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಣೆ ಮಾಡಿದ್ದಾರೆ. 
ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ 5 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ರೂ.1 ಲಕ್ಷ, ಸಣ್ಣಪುಟ್ಟ ಗಾಯಗೊಂಡವರಿಗೆ ರೂ.50 ಸಾವಿರ ಪರಿಹಾರ ನೀಡುವುದಾಗಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಹೇಳಿದ್ದಾರೆ . 
ಅಲ್ಲದೆ, ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೋಯಲ್ ಅವರು ಪ್ರಕಱಣವನ್ನು ತನಿಖೆಗೆ ಆದೇಶಿಸಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆಯನ್ನು ಒದಗಿಸುವಂತೆ ರೈಲ್ವೇ ಸುರಕ್ಷತಾ ಆಯೋಗಕ್ಕೆ ಸೂಚಿಸಿದ್ದಾರೆ. 
ಪ್ರಧಾನಿ ಮೋದಿ ಸಂತಾಪ
ಈ ನಡುವೆ ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. 
ರಾಯ್'ಬರೇಲಿ ಸಂಭವಿಸಿದ ರೈಲು ಅಪಘಾತದಿಂದ ಬಹಳ ನೋವಾಗಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಘಟನಾ ಸ್ಥಳದಲ್ಲಿ ಉತ್ತರಪ್ರದೇಶ ಸರ್ಕಾರ, ರೈಲ್ವೇ ಅಧಿಕಾರಿಗಳು ಹಾಗೂ ಎನ್'ಡಿಆರ್'ಎಪ್ ಪಡೆಗಳು ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com