ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತ ಮಾಹಿತಿ ನೀಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಬೆಲೆಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ನ್ಯಾಯಾಲಯ ಗಮನಹರಿಸುವುದಿಲ್ಲ ಆದರೆ, ಒಪ್ಪಂದ ಕುರಿತ ಮಾಹಿತಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಎಂದು ಸೂಚಿಸಿದೆ.