ಕಾಶ್ಮೀರ: ಪಿಎಚ್ ಡಿ ವಿದ್ಯಾರ್ಥಿ ಸೇರಿ ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರ ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಪಿಎಚ್ ಡಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರ ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಪಿಎಚ್ ಡಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಶಟ್ ಗುಂಡ್  ಗ್ರಾಮದಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಹತ್ಯೆಯಾದ ಉಗ್ರರ ಗುರುತನ್ನು ಪೊಲೀಸರು ಇನ್ನು ಖಚಿತಪಡಿಸಿಲ್ಲ.
ಕಳೆದ ಜನವರಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸೇರಿದ್ದ ಅಲಿಗಢ್ ಮುಸ್ಲಿಂ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಮನಾನ್ ಬಷಿರ್ ವನಿ ಮತ್ತೊಬ್ಬ ಉಗ್ರನೊಂದಿಗೆ ಇಂದು ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ.
ವನಿ ಹತ್ಯೆಯ ಬಳಿಕ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಕುಪ್ವಾರ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಬಂಡಿಪೋರಾ, ಬಾರಾಮುಲ್ಲಾ ಮತ್ತು ಶ್ರೀನಗರ ಜಿಲ್ಲೆಯ ಎಲ್ಲಾ ಪದವಿ ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ.
ಇಂದು ಮತ್ತೊಬ್ಬ ಪಿಎಚ್ ಡಿ ವಿದ್ಯಾರ್ಥಿ ಸಾವು ಆಯ್ಕೆ ಮಾಡಿಕೊಂಡಿದ್ದು, ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ನಾವು ನಿತ್ಯ ಉನ್ನತ ಶಿಕ್ಷಣ ಪಡೆದ ಯುವಕರನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com