ನವದೆಹಲಿ: ಇದೇ ಮೊಟ್ಟ ಮೊದಲ ಬಾರಿಗೆ ಗೋವಾ ಸಿಎಂ ಮನೋಹರ್ ಪರಿಕ್ಕರೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಪರಿಕ್ಕರ್ ಸೆಪ್ಟಂಬರ್ 15 ರಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.,
ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದ ಆಡಳಿತ, ಸಚಿವರು ಹಾಗೂ ಮೈತ್ರಿ ಪಾಲುದಾರರ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ, ಜೊತೆಗೆ ಕೆಲವು ಖಾತೆಗಳ ಹಂಚಿಕೆ ಬಗ್ಗೆ ಸಿಎಂ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.
ಇಂದು ನಡೆಯುವ ಸಂಪುಟ ಸಭೆಯವ್ವಿ ಲೋಕೋಪಯೋಗಿ ಸಚಿವ, ಸುದಿನ್ ದವಾಳಿಕರ್ ಸೇರಿದಂತೆ ಮೈತ್ರಿ ಪಕ್ಷದ ಸತಿವರು ಹಾಗೂ ಸ್ವತಂತ್ರ್ಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.