ಶಬರಿಮಲೆ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು: ಮಲೆಯಾಳಂ ನಟ

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಎಂದು...
ಕೊಲ್ಲಂ ತುಳಸಿ
ಕೊಲ್ಲಂ ತುಳಸಿ
Updated on
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಎಂದು ಮಲಯಾಳಂ ನಟ ಕೊಲ್ಲಂ ತುಳಸಿ ಅವರು ಶುಕ್ರವಾರ ಆಘಾತಕಾರಿ ಹೇಳಿಕೆ ನೀಡಿದ್ದಾರೆ. 
ಇಂದು ಕೊಲ್ಲಂ ಜಿಲ್ಲೆಯ ಚವರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ನಟ ತುಳಸಿ, ಶಬರಿಮಲೆಗೆ ಹೋಗುವ ಮಹಿಳೆಯರ ದೇಹವನ್ನುಎರಡು ಭಾಗವಾಗಿ ಕತ್ತರಿಸಬೇಕು. ಅದರಲ್ಲಿ ಒಂದು ಭಾಗವನ್ನು ದೆಹಲಿಗೆ ಮತ್ತು ಇನ್ನೊಂದು ಭಾಗವನ್ನು ತಿರುವನಂತಪುರದ ಮುಖ್ಯಮಂತ್ರಿಗಳ ಕಚೇರಿಗೆ ಕಳುಹಿಸಬೇಕು ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಮೂಢರು ಎಂದು ತುಳಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಅಯ್ಯಪ್ಪಸ್ವಾಮಿ ಭಕ್ತರ ಗುಂಪೊಂದು ಕೊಲ್ಲಂನಲ್ಲಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿತ್ತು. ಈ ಪ್ರತಿಭಟನಾ ಮೆರವಣಿಗೆಯನ್ನು ಉದ್ದೇಶಿಸಿ ನಟ ತುಳಸಿ ಈ ರೀತಿ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com