ಕೊಲ್ಲಂ ಜಿಲ್ಲೆಯ ಚವರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ನಟ ತುಳಸಿ, ಶಬರಿಮಲೆಗೆ ಹೋಗುವ ಮಹಿಳೆಯರ ದೇಹವನ್ನುಎರಡು ಭಾಗವಾಗಿ ಕತ್ತರಿಸಬೇಕು. ಅದರಲ್ಲಿ ಒಂದು ಭಾಗವನ್ನು ದೆಹಲಿಗೆ ಮತ್ತು ಇನ್ನೊಂದು ಭಾಗವನ್ನು ತಿರುವನಂತಪುರದ ಮುಖ್ಯಮಂತ್ರಿಗಳ ಕಚೇರಿಗೆ ಕಳುಹಿಸಬೇಕು ಎಂದು ವಿವಾದಾತ್ಮ ಹೇಳಿಕೆ ನೀಡಿದ್ದರು. ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಮೂಢರು ಎಂದು ತುಳಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.