ವೈಷ್ಣೋದೇವಿ ಯಾತ್ರಾರ್ಥಿಗಳಿಗೆ 5 ಲಕ್ಷ ರೂಪಾಯಿ ವಿಮೆ

ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ನೀಡಲಾಗುವ ಉಚಿತ ವಿಮೆ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ಅ.14 ರಂದು ಶ್ರೀನಗರದ ರಾಜಭವನದಲ್ಲಿ ನಡೆದ ದೇವಾಲಯದ ಆಡಳಿತ ಮಂಡಳಿಯ 63 ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಮ್ಮು-ಕಾಶ್ಮೀರದ ರಾಜ್ಯಪಾಲ ಸತ್ಯ ಪಾಲ್ ಮಲೀಕ್ ದೇವಾಲಯದ ಮಂಡಳಿಯ ಅಧ್ಯಕ್ಷರೂ ಆಗಿದ್ದು, ಯಾತ್ರಾರ್ಥಿಗಳಿಗೆ ನೀಡಲಾಗುವ ಉಚಿತ ವಿಮೆ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. 
ಈಗಿರುವ ನಿಯಮಗಳ ಪ್ರಕಾರ 5 ವರ್ಷದ ಮೇಲ್ಪಟ್ಟವರಿಗೆ 3 ಲಕ್ಷ ರೂಪಾಯಿ ಉಚಿತ ವಿಮೆ ಅನ್ವಯವಾಗುತ್ತಿತ್ತು, 5 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ 1 ಲಕ್ಷರೂಪಾಯಿ ವಿಮೆ ಅನ್ವಯವಾಗುತ್ತಿತ್ತು. ಭವನ್ ಹಾಗೂ ಭೈರೋನ್ ಘಾಟಿ ನಡುವೆ ರೋಪ್ ವೇ ಯನ್ನು ಬಳಕೆ ಮಾಡುವ ಪ್ರಯಾಣಿಕರಿಗೆ ಹೆಚ್ಚುವರಿ 5 ಲಕ್ಷದ ವಿಮೆ ಅನ್ವಯವಾಗಲಿದೆ ಎಂದು ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com