ಲೈಂಗಿಕ ಕಿರುಕುಳ ಆರೋಪಗಳು ಕುರಿತು ಶೀಘ್ರದಲ್ಲೇ ಪ್ರತಿಕ್ರಿಯೆ ನೀಡುವೆ: ಎಂ.ಜೆ.ಅಕ್ಬರ್
ನನ್ನ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪಗಳ ಕುರಿತು ಶೀಘ್ರದಲ್ಲಿಯೇ ಪ್ರತಿಕ್ರಿಯೆ ನೀಡುವೆ ಎಂದು ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಎಂ.ಜೆ.ಅಕ್ಬರ್ ಅವರು ಭಾನುವಾರ ಹೇಳಿದ್ದಾರೆ...
ನವದೆಹಲಿ: ನನ್ನ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪಗಳ ಕುರಿತು ಶೀಘ್ರದಲ್ಲಿಯೇ ಪ್ರತಿಕ್ರಿಯೆ ನೀಡುವೆ ಎಂದು ವಿದೇಶಾಂಗ ಖಾತೆಗಳ ರಾಜ್ಯ ಸಚಿವ ಎಂ.ಜೆ.ಅಕ್ಬರ್ ಅವರು ಭಾನುವಾರ ಹೇಳಿದ್ದಾರೆ.
ವಿದೇಶ ಪ್ರವಾಸ ಕೈಗೊಂಡಿದ್ದ ಅಕ್ಬರ್ ಅವರು ಇಂದು ಬೆಳಿಗ್ಗೆಯಷ್ಟೇ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ.
ಈ ವೇಳೆ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನೈಜೀರಿಯಾಗೆ ಅಧಿಕೃತ ಭೇಟಿ ನೀಡಿದ್ದೆ. ಆರೋಪಗಳ ಕುರಿತು ಶೀಘ್ರದಲ್ಲಿಯೇ ಪ್ರತಿಕ್ರಿಯೆ ನೀಡುವೆ ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಮಹಿಳಾ ಪತ್ರಕರ್ತೆಯೊಬ್ಬರು ದಿ ಟೆಲಿಗ್ರಾಫ್ ಪತ್ರಿಕೆಯ ಸಂಪಾದಕರಾಗಿದ್ದ ಎಂ.ಜೆ.ಅಕ್ಬರ್ ಅವರು ತಮಗೆ ವೃತ್ತಿ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪ ಮಾಡಿದ್ದರು.
ಈ ಆರೋಪ ಸಂಬಂಧ ವಿರೋಧ ಪಕ್ಷಗಳು ಅಕ್ಬರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದೆ.