ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ಹಾರಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಎಐ 864ದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಚಾಲನೆಯಾಗುತ್ತಿದ್ದಂತೆಯೇ ವಿಮಾನದಲ್ಲಿದ್ದ ಸುಮಾರು 53 ವರ್ಷದ ಗಗನಸಖಿಯೊಬ್ಬರು ವಿಮಾನದ ಬಾಗಿಲು ಮುಚ್ಚಲು ಪ್ರಯತ್ನಿಸಿದ್ದಾರೆ. ಈ ವೇಳೆ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.