ಈ ಸಂಬಂಧ ಕೇಂದ್ರ ಸರ್ಕಾರ ಕಾರ್ಯಮಗ್ನವಾಗಿದ್ದು, 2019ರ ಜುಲೈನಿಂದ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದೇ ವಿನ್ಯಾಸ, ಬಣ್ಣದ ಡಿಎಲ್ ಕಾರ್ಡ್ ವಿತರಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಮುಂದಿನ ಜುಲೈನಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು(ಆರ್‌ಸಿ) ನೀಡಲು ಕೇಂದ್ರ ರಸ್ತೆ ಸರಿಗೆ ಸಚಿವಾಲಯ ಚಿಂತನೆ ನಡೆಸಿದ್ದು, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ ಡಿಎಲ್ ಹಾಗೂ ಆರ್‌ಸಿಗಳ ಬಣ್ಣ, ವಿನ್ಯಾಸ ಮತ್ತು ಭದ್ರತಾ ವೈಶಿಷ್ಟ್ಯಗಳು ಒಂದೇ ರೀತಿಯಾಗಿ ಇರಲಿವೆ.