ಜಮ್ಮು; ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸಿಆರ್'ಪಿಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಸಿಆರ್'ಪಿಎಫ್ ಕ್ಯಾಂಪ್ ಬಳಿ ಬಂದಿರುವ ಉಗ್ರರು ಇದ್ದಕ್ಕಿದ್ದಂತೆಯೇ ಯೋಧರ ಮೇಲೆ ಗುಂಡಿ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಯೋಧರು ಕಾರ್ಯಾಚರಣೆಗಿಳಿದಿದ್ದು, ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.