ದೇಶ

ಶಬರಿಮಲೆಗೆ ತೆರಳುತ್ತಿದ್ದ ಮಹಿಳೆಯರ, ಪತ್ರಕರ್ತೆಯರ ಮೇಲೆ ದಾಳಿ, ವಾಹನಗಳಿಗೆ ಹಾನಿ

ಶಬರಿಮಲೆಗೆ ತೆರಳುತ್ತಿದ್ದ ಮಹಿಳೆಯರ, ಪತ್ರಕರ್ತೆಯರ ಮೇಲೆ ದಾಳಿ, ವಾಹನಗಳಿಗೆ ಹಾನಿ
ಪತ್ರಕರ್ತರ ವಾಹನ ಧ್ವಂಸಗೊಳಿಸುತ್ತಿರುವ ಪ್ರತಿಭಟನಾಕಾರರು
Published On :
ತಿರುವನಂತಪುರ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಶಬರಿಮಲೆಗೆ ಮಹಿಳೆಯರ ಪ್ರವೇಶ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ನಿಳಕ್ಕಲ್ ನಲ್ಲಿ ಮಹಿಳೆಯರ ಮತ್ತು ವರದಿಗಾರರ ಮೇಲೆ ದಾಳಿ ನಡೆಸಿದ್ದು, ಹಲವು ವಾಹನಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಿಪಬ್ಲಿಕ್ ಟಿವಿ, ಸಿಎನ್ಎನ್ ನ್ಯೂಸ್ 18, ಆಜ್ ತಕ್ ಮತ್ತು ನ್ಯೂಸ್ ಮಿನಿಟ್ ಮಹಿಳಾ ಪತ್ರಕರ್ತೆಯರ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಅಲ್ಲದೆ ಅವರು ಪ್ರಯಾಣಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಅಯ್ಯಪ್ಪ, ಅಯ್ಯಪ್ಪ ಎಂದು ಘೋಷಣೆ ಕೂಗುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಪ್ರತಿಭಟನಾಕಾರರು ಹಲವು ಮಹಿಳೆಯರ ಮತ್ತು ಪತ್ರಕರ್ತೆಯರ ಮೇಲೆ ದಾಳಿ ನಡೆಸಿದ್ದು, ವಾಹನಗಳನ್ನು ಧ್ವಂಸಗೊಳಿಸಿದ್ದಾರೆ.
ನಿಳಕ್ಕಲ್ ಶಬರಿಮಲೆಯಿಂದ 20 ಕಿ.ಮೀ. ದೂರದಲ್ಲಿದ್ದು, ಪಂಪಾ ನದಿ ತಲುಪಲು ಇದೊಂದೇ ಮಾರ್ಗ. ಹೀಗಾಗಿ ಪ್ರತಿಭಟನಾಕಾರರು ಇಲ್ಲಿ ಜಮಾಯಿಸಿ ಮಹಿಳೆಯರು ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ತಡೆಯುತ್ತಿದ್ದಾರೆ.
ಕಳೆದ ಸೆಪ್ಟೆಂಬರ್ 28ರಂದು ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿದ್ದು, ತೀರ್ಪು ಪ್ರಕಟವಾದ ನಂತರ ಇಂದು ಮೊದಲ ಬಾರಿಗೆ ಅಯ್ಯಪ್ಪಸ್ವಾಮಿ ದೇಗುಲದ ಬಾಗಿಲು ತೆರೆಯಲಾಗಿದೆ. ಇದೇ ಕಾರಣಕ್ಕೆ ಮಹಿಳೆಯರ ಪ್ರವೇಶಕ್ಕೆ ಅಯ್ಯಪ್ಪ ಸ್ವಾಮಿ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಮಾತ್ರ ಸುಪ್ರೀಂಕೋರ್ಟ್ ತೀರ್ಪು ಪಾಲನೆಗೆ ರಾಜ್ಯಸರ್ಕಾರ ಬದ್ಧವಾಗಿದ್ದು, ದೇಗುಲ ಪ್ರವೇಶ ಮಾಡುವವರಿಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.