ದೇಶ

ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ ಸೇನೆ, ಪುಲ್ವಾಮದಲ್ಲಿ ಓರ್ವ ಉಗ್ರನ ಹತ್ಯೆ!

ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಿದ ಸೇನೆ, ಪುಲ್ವಾಮದಲ್ಲಿ ಓರ್ವ ಉಗ್ರನ ಹತ್ಯೆ!
ಸಂಗ್ರಹ ಚಿತ್ರ
Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದ್ದು, ಈ ವೇಳೆ ಓರ್ವ ಉಗ್ರನನ್ನು ಸೈನಿಕರು ಹತ್ಯೆಗೈದಿದ್ದಾರೆ.
ಪುಲ್ವಾಮಾ ಜಿಲ್ಲೆಯ ಬೊಂಗಮ್ ಕಾಕ್ಪರಾ ಅವಂತಿಪೋರಾದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆಯ 50 ರಾಷ್ಟ್ರೀಯ ದಳ ಹಾಗೂ ಎಸ್ ಒಜಿ ದಳಗಳ ಭದ್ರತಾ ಸಿಬ್ಬಂದಿಗಳು ತುರ್ತು ಕಾರ್ಯಾಚರಣೆ ನಡೆಸಿದ್ದಾರೆ. 
ಸುಮಾರು 5ಕ್ಕೂ ಹೆಚ್ಚು ಉಗ್ರ ತಂಡ ಅಡಗಿರುವ ಪ್ರದೇಶದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರುರ ಸೈನಿಕರತ್ತ ಗುಂಡಿನ ದಾಳಿ ನಡೆಸಿದ್ದು, ಉಗ್ರರು ಮತ್ತು ಸೇನೆ ನಡುವೆ ತೀವ್ರ ತರವಾದ ಗುಂಡಿನ ಚಕಮಕಿ ನಡೆದಿದೆ. 
ಈ ವೇಳೆ ಸೈನಿಕರು ಹಾರಿಸಿದ ಗುಂಡಿಗೆ ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಮೃತ ಉಗ್ರನನ್ನು ಪದ್ಗಮ್ ಪೋರಾ ನಿವಾಸಿ ಶೌಕಾತ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್ ನಲ್ಲಿ ಈತ ಉಗ್ರ ಸಂಘಟನೆಗೆ ಸೇರಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಕಣಿವೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂತರ್ಜಾಲ ಸೇವೆ ಮತ್ತು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.