ಸಾಯಿಬಾಬಾ ಸಮಾಧಿಸ್ಥರಾಗಿ 100 ವರ್ಷ: ಶಿರಡಿಗೆ ತೆರಳಿ ಬಾಬಾ ದರ್ಶನ ಪಡೆದ ಪ್ರಧಾನಿ

ಶಿರಡಿ ಸಾಯಿಬಾಬಾ ಸಮಾಧಿಸ್ಥರಾಗಿ ನೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಭಾರತ ಪ್ರಧಾನಿ ನರೇಂದ್ರ ಮೋದಿ ಶಿರಡಿ ಸಾಯಿಬಾಬಾ ಸಮಾಧಿ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಶಿರಡಿ ಸಾಯಿಬಾಬಾ ಸಮಾಧಿ ಮಂದಿರದಲ್ಲಿ ಪ್ರಧಾನಿ ಮೋದಿ
ಶಿರಡಿ ಸಾಯಿಬಾಬಾ ಸಮಾಧಿ ಮಂದಿರದಲ್ಲಿ ಪ್ರಧಾನಿ ಮೋದಿ
ಶಿರಡಿ(ಮಹಾರಾಷ್ಟ್ರ): ಶಿರಡಿ ಸಾಯಿಬಾಬಾ ಸಮಾಧಿಸ್ಥರಾಗಿ ನೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಭಾರತ ಪ್ರಧಾನಿ ನರೇಂದ್ರ ಮೋದಿ ಶಿರಡಿ ಸಾಯಿಬಾಬಾ ಸಮಾಧಿ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಸಾಯಿಬಾಬಾ ಸಮಾಧಿ ಮಂದಿರದಲ್ಲಿ ಪ್ರಾರ್ಥನೆ, ಪೂಜೆ ನೆರವೇರಿಸಿದ ಮೋದಿ ಬಳಿಕ ಸಾಯಿಬಾಬಾ ಸಮಾಧಿ ಟ್ರಸ್ಟ್ ವತಿಯ ಅನೇಕ ಅಭಿವೃದ್ದಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನೆರವೇರಿಸುವ ಮೂಲಕ ಚಾಲನೆ ನಿಉಡಿದರು.
ಇದೇ ವೇಳೆ ಸಾಯಿಬಾಬಾ ಸಮಾಧಿಸ್ಥರಾಗಿ ನೂರು ವರ್ಷ ಪೂರೈಸಿರುವ ನೆನಪಲ್ಲಿ ವಿಶೇಷ ಬೆಳ್ಳಿ ನಾಣ್ಯವನ್ನು ಮೋದಿ ಬಿಡುಗಡೆಗೊಳಿಸಿದ್ದಾರೆ.
ಇದಕ್ಕೆ ಮುನ್ನ ಪ್ರಧಾನಿ ಮೋದಿ ಪ್ರಧಾನಿ ಆವಾಸ್ ಯೋಜನ್-ಗ್ರಾಮೀಣ (ಪಿಎಎಂಇ-ಜಿ) ಯ ಫಲಾನುಭವಿಗಳಿಗೆಸಾರ್ವಜನಿಕ ಸಮಾರಂಭದಲ್ಲಿ ಕೀಲಿ ಕೈಗಳನ್ನು ಹಸ್ತಾಂತರಿಸಿದ್ದಾರೆ.ಅಲ್ಲದೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಮುನ್ನ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 29 ಜಿಲ್ಲೆಗಳ ಫಲಾನುಭವಿಗಳೊಂದಿಗೆ ಸಂವಹನ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com