ಅಮೃತಸರ ದುರಂತ: ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆದೇಶ!

ರೈಲು ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಸಚಿವ ನವಜೋತ್ ಸಿಂಗ್ ಸಿಧು ಇತರರು
ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಸಚಿವ ನವಜೋತ್ ಸಿಂಗ್ ಸಿಧು ಇತರರು

ಅಮೃತಸರ : ರೈಲು ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.

ಮೃತ ಕುಟುಂಬಗಳ ಸದಸ್ಯರಿಗೆ ಪರಿಹಾರ ನೀಡಲು ಜಿಲ್ಲಾಡಳಿತಕ್ಕೆ ಕೂಡಲೇ 3 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಅವರು ಆದೇಶಿಸಿದ್ದಾರೆ.

ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್ ದುರಂತ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ನಾಲ್ಕು ವಾರಗಳೊಳಗೆ ವರದಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ದುರಂತದಲ್ಲಿ 59 ಜನರು ಮೃತಪಟ್ಟಿದ್ದು, 57 ಜನರು ಗಾಯಗೊಂಡಿದ್ದಾರೆ. ಆದಷ್ಟು ಬೇಗ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು, 9 ಜನರನ್ನು ಹೊರತುಪಡಿಸಿದಂತೆ ಉಳಿದೆಲ್ಲಾ  ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com