ದುರಂತ ಸಂಭವಿಸಿದ ರೈಲು ಹಳಿ ಮೇಲೆ ನಿಂತು ಸ್ಥಳೀಯರ ಪ್ರತಿಭಟನೆ
ದೇಶ
ಅಮೃತಸರ ದುರಂತ: ರೈಲು ಚಾಲಕನ ವಿರುದ್ಧ ಕ್ರಮಕ್ಕೆ ಸ್ಥಳೀಯರ ಒತ್ತಾಯ
ಘನ ಘೋರ ರೈಲು ದುರಂತ ಸಂಭವಿಸಿದ ಜೊಡಾ ಪಠಾಕ್ ರೈಲು ಹಳಿ ಮೇಲೆ ಕುಳಿತು ಇಂದು ಕೂಡಾ ಸ್ಥಳೀಯರು ಪ್ರತಿಭಟನೆ ಮುಂದುವರೆಸಿದ್ದು, ರೈಲು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಅಮೃತಸರ: ಘನ ಘೋರ ರೈಲು ದುರಂತ ಸಂಭವಿಸಿದ ಜೊಡಾ ಪಠಾಕ್ ರೈಲು ಹಳಿ ಮೇಲೆ ಕುಳಿತು ಇಂದು ಕೂಡಾ ಸ್ಥಳೀಯರು ಪ್ರತಿಭಟನೆ ಮುಂದುವರೆಸಿದ್ದು, ರೈಲು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು, ಚಾಲಕನ ಅಜಾಗರೂಕತೆಯಿಂದಾಗಿಯೇ ದುರಂತ ಸಂಭವಿಸಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ರೈಲ್ವೆ ಹಳಿ ಮೇಲೆ ಕುಳಿತು ಪ್ರತಿಭಟಿಸದಂತೆ ಪೊಲೀಸರು ಸ್ಥಳೀಯರಿಗೆ ಹೇಳುತ್ತಿದ್ದಾರೆ. ಪ್ರತಿಭಟನೆಗೆ ಬರುತ್ತಿರುವವರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಸಂಜೆ ವೇಳೆಗೆ ಸಹಜ ಪರಿಸ್ಥಿತಿ ಮರುಕಳಿಸಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಪರಿಸ್ಥಿತಿ ನಿರ್ವಹಣೆಗಾಗಿ ಕಮಾಂಡೋ ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕ್ಷಿಪ್ರ ಕಾರ್ಯ ಪಡೆ ಕೂಡಾ ಪ್ರತಿಭಟನಾ ಸ್ಥಳದಲ್ಲಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ