ಜಮ್ಮು-ಕಾಶ್ಮೀರ :ಕುಲ್ಗಾಮ್ ನಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೊ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಪ್ರಗತಿಯಲ್ಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕುಲ್ಗಾಮ್ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಲ್ಗಾಮ್  ಜಿಲ್ಲೆಯ ಲಾರೊ ಪ್ರದೇಶದಲ್ಲಿ  ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ಪ್ರಗತಿಯಲ್ಲಿದೆ.

 ಒಂದೆರಡು ಉಗ್ರರು ಮನೆಯೊಂದರಲ್ಲಿ ಅಡಗಿ ಕುಳಿತಿರುವ ಶಂಕೆ ಇದ್ದು, ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.

ಉತ್ತರ ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಕ್ರಲ್ಹಾರ್ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಎರಡು ದಿನಗಳ ನಂತರ ಮತ್ತೆ ಭದ್ರತಾ ಪಡೆಗಳು ಇಂದು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿವೆ.

ಅಂದಿನ ಕಾರ್ಯಾಚರಣೆ ವೇಳೆಯಲ್ಲಿ ಎರಡು ಎಕೆ -47, ಮೂರು ಗ್ರೇನೆಡ್ಸ್ , ಎರಡು ಚೈನಾದ ಪಿಸ್ತೂಲ್ ಮತ್ತಿತರ ಶಸಾಸ್ತ್ರಗಳನ್ನು  ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com