ಬಸ್- ಲಾರಿ ಮುಖಾಮುಖಿ ಡಿಕ್ಕಿ : ಒಬ್ಬ ವಿದ್ಯಾರ್ಥಿ ಸಾವು, 20 ಮಂದಿಗೆ ಗಾಯ

ಬಿಹಾರದ ಔರಂಗಬಾದ್ ಜಿಲ್ಲೆಯಲ್ಲಿ ಕಳೆದ ಮಧ್ಯರಾತ್ರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಶಾಲಾ ಬಾಲಕನೊಬ್ಬ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದ ಚಿತ್ರ
ಅಪಘಾತದ ಚಿತ್ರ

ಔರಂಗಬಾದ್ : ಬಿಹಾರದ ಔರಂಗಬಾದ್ ಜಿಲ್ಲೆಯಲ್ಲಿ ಕಳೆದ ಮಧ್ಯರಾತ್ರಿ  ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ  ಶಾಲಾ ಬಾಲಕನೊಬ್ಬ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ ಶಾಲಾ ಪ್ರವಾಸ ಮುಗಿಸಿ ರಾಜ್ ಗಿರ್ ನಿಂದ ಮನೆಗೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ . ಗಾಯಾಗಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಷಯ ಕುರಿತಂತೆ ಮಾತನಾಡಿದ ಔರಂಗಬಾದ್  ಉಪ ವಿಭಾಗೀಯ ಅಧಿಕಾರಿ ಪ್ರದೀಪ್ ಕುಮಾರ್,  ಅಪಘಾತದಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ. ಪರಿಸ್ಥಿತಿ ಗಂಭೀರವಾಗಿರುವವರನ್ನು  ಬೇರೆಡೆಗೆ ಸಾಗಿಸಲಾಗಿದೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com