2019ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಏಕಾಂಗಿ ಸ್ಪರ್ಧೆ?

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ(ಎಸ್ಪಿ) ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸೇರಿದಂತೆ...
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
ಲಖನೌ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ(ಎಸ್ಪಿ) ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ಬಹುಜನ ಸಮಾಜ ಪಕ್ಷ(ಬಿಎಸ್ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ಚತ್ತೀಸ್ ಗಢ, ಮಧ್ಯ ಪ್ರದೇಶ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳದಿರುವುದರಿಂದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಎಸ್ಪಿ ಜತೆ ಮೈತ್ರಿಗೆ ಸಮಾಜವಾದಿ ಪಕ್ಷದಲ್ಲೇ ವಿರೋಧ ವ್ಯಕ್ತವಾಗುತ್ತಿದೆ.
ಬಿಎಸ್ಪಿ ಕಾಂಗ್ರೆಸ್ ಜತೆ ಮೈತ್ರಿ ನಿರಾಕರಿಸಿದ್ದರಿಂದ ಅಲ್ಪ ಸಂಖ್ಯಾತರ ಮತ ಕಳೆದುಕೊಳ್ಳುವ ಸಾಧ್ಯತೆ ಇದೆ. ಆದರೆ ಅಲ್ಪ ಸಂಖ್ಯಾತ ಮತ ಸೆಳೆಯಲು ಮುಂದಾಗಿರುವ ಎಸ್ಪಿ 2019ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಯಿಂದ ದೂರ ಉಳಿಯಲು ನಿರ್ಧರಿಸಿದೆ ಎನ್ನಲಾಗಿದೆ.
ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಎಸ್ಪಿ ಜತೆ ಸಮಾಜವಾದಿ ಪಕ್ಷ ಯಾವತ್ತೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅವರ ಈ ನಿರ್ಧಾರದಿಂದ ಅಲ್ಪ ಸಂಖ್ಯಾತ ಮತಗಳು ಎಸ್ಪಿಗೆ ಶಿಫ್ಟ್ ಆಗಲಿವೆ ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ ಈಗಾಗಲೇ 60 ಕ್ಷೇತ್ರಗಳಿಗೆ ಎಸ್ಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಎಸ್ಪಿ ಜತೆ ಮೈತ್ರಿಗೆ ಮಾಯಾವತಿ ಸಹ ಹಿಂದೇಟು ಹಾಕುತ್ತಿದ್ದು, ಇದು ಅಖಿಲೇಶ್ ಯಾದವ್ ಅವರು ಮಹಾಮೈತ್ರಿ ಸೇರುವ ಬಗ್ಗೆ ಚಿಂತಿಸುವಂತೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com