ಪಟಾಕಿ ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಕಾರ

ಬೆಳಕಿನ ಹಬ್ಬ ದೀಪಾವಳಿ ಹತ್ತಿರ ಬರುತ್ತಿದ್ದು, ಈ ವೇಳೆ ಪಟಾಕಿ ಸಿಡಿಸುವ ಕುರಿತು ಎದುರಾಗಿದ್ದ ಗೊಂದಲ ಹಾಗೂ ಕುತೂಹಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದಿದ್ದು, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಮಂಗಳವಾರ ಹೇಳಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹತ್ತಿರ ಬರುತ್ತಿದ್ದು, ಈ ವೇಳೆ ಪಟಾಕಿ ಸಿಡಿಸುವ ಕುರಿತು ಎದುರಾಗಿದ್ದ ಗೊಂದಲ ಹಾಗೂ ಕುತೂಹಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದಿದ್ದು, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಮಂಗಳವಾರ ಹೇಳಿದೆ. 
ಪರಿಸರ ಮಾಲೀನ್ಯದ ಕಾರಣದ ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟ ನಿಷೇಧಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪಟಾಕಿ ಮಾರಾಟದ ಮೇಲೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದೆ. ಆದರೆ, ಪಟಾಕಿ ಮಾರಾಟಕ್ಕೆ ಕೆಲ ಷರತ್ತುಗಳ ಅಗತ್ಯವಿದೆ ಎಂದು ಹೇಳಿದೆ. 
ಪಟಾಕಿ ಮಾರಾಟಕ್ಕೆ ಷರತ್ತುಗಳನ್ನು ವಿಧಿಸಿರುವ ನ್ಯಾಯಾಲಯ, ಕಡಿಮೆ ಮಾಲಿನ್ಯ ಉಂಟು ಮಾಡುವ ಪಟಾಕಿಗಳಿಗೆ ಮಾತ್ರ ಅನುಮತಿ ನೀಡಿದೆ. ಅಲ್ಲದೆ, ನಿಗದಿಪಡಿಸಿದ ಪ್ರದೇಶಗಳಲ್ಲಿ ಮಾತ್ರ ಸೀಮಿತ ಸಮಯದಲ್ಲಿ ಪಟಾಕಿ ಹೊಡೆಯಲು ಅನುವು ಮಾಡಿಕೊಟ್ಟಿದೆ. 

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10ಗಂಟೆಯವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶವಿದ್ದು, ಕ್ರಿಸ್ ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಜನರು ಮಧ್ಯರಾತ್ರಿ 11.55 ರಿಂದ 12.30 ವರಗೆ ಪಟಾಕಿ ಸಿಡಿಸಲು ಅನುಮತಿ ನೀಡಿದೆ. 
ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಾಯುಮಾಲಿನ್ಯ ಅಪಾಯದ ಮಟ್ಟ ಮೀರಿದೆ. ಹೀಗಾಗಿ ಸುಪ್ರೀಂಕೋರ್ಟ್ ಕಳೆದ ವರ್ಷ ದೆಹಲಿಯಲ್ಲಿ ಪಟಾಕಿ ಮಾರಾಟವನ್ನು ನಿಷೇಧಿಸಿತ್ತು. ಹಾಗೆಯೇ ದೇಶದಾದ್ಯಂತ ಪಟಾಕಿ ನಿಷೇಧಿಸುವಂತೆ ಕೋರಿ ಅರ್ಜಿಯೊಂದು ಸಲ್ಲಿಕೆಯಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com