ಸಿಬಿಐ ಅಸ್ಥಿತ್ವವನ್ನು ಮೋದಿ ಸರ್ಕಾರ ವ್ಯವಸ್ಥಿತವಾಗಿ ಹಾಳು ಮಾಡುತ್ತಿದೆ: ಕಾಂಗ್ರೆಸ್

ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿನ ಅಂತರ್ಯುದ್ಧದ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಮೋದಿ ಸರ್ಕಾರ ಸಿಬಿಐ ನ್ನು ವ್ಯವಸ್ಥಿತವಾಗಿ ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸಿಬಿಐ ಅಸ್ಥಿತ್ವವನ್ನು ಮೋದಿ ಸರ್ಕಾರ ವ್ಯವಸ್ಥಿತವಾಗಿ ಹಾಳು ಮಾಡುತ್ತಿದೆ: ಕಾಂಗ್ರೆಸ್
ಸಿಬಿಐ ಅಸ್ಥಿತ್ವವನ್ನು ಮೋದಿ ಸರ್ಕಾರ ವ್ಯವಸ್ಥಿತವಾಗಿ ಹಾಳು ಮಾಡುತ್ತಿದೆ: ಕಾಂಗ್ರೆಸ್
ನವದೆಹಲಿ: ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿನ ಅಂತರ್ಯುದ್ಧದ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಮೋದಿ ಸರ್ಕಾರ ಸಿಬಿಐ ನ್ನು ವ್ಯವಸ್ಥಿತವಾಗಿ ಹಾಳು ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 
ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲ ಮೋದಿ ಸರ್ಕಾರದ ಬಗ್ಗೆ ಟ್ವಿಟರ್ ನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದು, ಸಿಬಿಐ ನಲ್ಲಿ ನಡೆಯುತ್ತಿರುವ ಘಟನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.
ಸ್ವತಂತ್ರ ತನಿಖಾ ಸಂಸ್ಥೆಯಾಗಿರುವ ಸಿಬಿಐ ಗೆ ಮೋದಿ ಸರ್ಕಾರ ಕೊನೆಯ ಮೊಳೆ ಹೊಡೆದಿದ್ದು ವ್ಯವಸ್ಥಿತವಾಗಿ ಸಿಬಿಐಯನ್ನು ದುರ್ಬಲಗೊಳಿಸುತ್ತಿದೆ ಎಂದು ಸುರ್ಜೇವಾಲ ಆರೋಪಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಸಿಬಿಐ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸಿಬಿಐ ಹಾಗೂ ರಾ ದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ರಣ್ದೀಪ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com