ಸಿಬಿಐ ಮುಖ್ಯಸ್ಥರಾಗಿ ನಾಗೇಶ್ವರ ರಾವ್ ನೇಮಕ ಪ್ರಶ್ನಿಸಿ ಅಲೋಕ್ ವರ್ಮಾ ಅರ್ಜಿ: 'ಸುಪ್ರೀಂ' ವಿಚಾರಣೆ ಶುಕ್ರವಾರ

ತಮ್ಮನ್ನು ರಜೆ ಮೇಲೆ ಕಳುಹಿಸುವ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಸಲ್ಲಿಸಿರುವ ಅರ್ಜಿ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ತಮ್ಮನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಸಿಬಿಐನ ಹಂಗಾಮಿ ನಿರ್ದೇಶಕರನ್ನಾಗಿ ಎಂ ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ನಿರ್ದೇಶಕರಾಗಿ ನೇಮಿಸಿರುವ ಸರ್ಕಾರದ  ನಿರ್ಧಾರವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ವರ್ಮಾ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಳ್ಳಲಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿ ರಾಜೇಶ್ವರ್ ಸಿಂಗ್ ಅವರಿಗೆ ಅಡ್ವೊಕೇಟ್ ಆಗಿರುವ ಗೋಪಾಲ್ ಶಂಕರನಾರಾಯಣನ್, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠಕ್ಕೆ ವರ್ಮ ಅವರ ಅರ್ಜಿಯನ್ನು ಪ್ರಸ್ತಾಪಿಸಿದ್ದು, ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ ನಿಗದಿಪಡಿಸಿದ್ದಾರೆ.

ಸೂಕ್ಷ್ಮ ಪ್ರಕರಣಗಳ ವಿಚಾರಣೆ ನಡೆಸುವ ಮುಖ್ಯ ತನಿಖಾಧಿಕಾರಿಗಳನ್ನು ಏಕಾಏಕಿ ಸರ್ಕಾರ ಬದಲಿಸಿದ್ದು ಏಕೆ ಹಾಗೂ ತಮ್ಮನ್ನು ಕಡ್ಡಾಯ ರಜೆಯ ಮೇಲೆ ತೆರಳಲು ಹೇಳಿರುವ ನಿರ್ಧಾರ ಎಷ್ಟು ಸರಿ ಎಂದು ವರ್ಮ ತಮ್ಮ ಅರ್ಜಿಯಲ್ಲಿ ಕೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸಂಪುಟಗಳ ನೇಮಕಾತಿ ಸಮಿತಿ ಎಂ ನಾಗೇಶ್ವರ್ ರಾವ್ ರನ್ನು ಸಿಬಿಐನ ಹಂಗಾಮಿ ನಿರ್ದೇಶಕರಾಗಿ ನೇಮಕ ಮಾಡಿದ್ದು ಅಂತೆ ನಾಗೇಶ್ವರ ರಾವ್ ಅಧಿಕಾರ ಸ್ವೀಕರಿಸಿದ್ದಾರೆ.

ವಿಚಾರಣೆ ವೇಳೆ ನ್ಯಾಯಾಧೀಶ ಶಂಕರನಾರಾಯಣನ್, ಬೆಳಗ್ಗೆ 6 ಗಂಟೆಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಸರ್ಕಾರ ಸೂಚಿಸಿದ್ದು ಇದರಿಂದ ಸೂಕ್ಷ್ಮ ತನಿಖೆಗಳ ವಿಚಾರಣೆ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ.

ಸಿಬಿಐನ ಆಂತರಿಕ ಕಲಹದ ಹಿನ್ನಲೆಯಲ್ಲಿ ಅದರ ಮುಖ್ಯಸ್ಥ ಅಲೋಕ್ ಕುಮಾರ್ ವರ್ಮ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ಅವರನ್ನು ರಜೆ ಮೇಲೆ ತೆರಳುವಂತೆ ಹೇಳಿ ನಾಗೇಶ್ವರ ರಾವ್ ಅವರನ್ನು ತಕ್ಷಣವೇ ಅಧಿಕಾರ ಸ್ವೀಕರಿಸುವಂತೆ ಕೇಂದ್ರ ಸರ್ಕಾರ ನಿನ್ನೆ ಆದೇಶ ಹೊರಡಿಸಿತ್ತು.

ಸಿಬಿಐ ಸಂಸ್ಥೆಯ ಇತಿಹಾಸದಲ್ಲಿ ಇದೊಂದು ಮೊದಲ ಪ್ರಕರಣ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಏನು ಹೇಳಿಕೆ ನೀಡುತ್ತದೆ ಎಂಬ ಬಗ್ಗೆ ಎಲ್ಲರ ಕುತೂಹಲ ನೆಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com