ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಸಿಐಎಸ್ಎಫ್ ಅಧಿಕಾರಿ ಹುತಾತ್ಮ

ಜಮ್ಮು ಮತ್ತು ಕಾಶ್ಮೀರ ನೌಗಾಮ್ ಪ್ರದೇಶದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿ ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನೌಗಾಮ್: ಜಮ್ಮು ಮತ್ತು ಕಾಶ್ಮೀರ ನೌಗಾಮ್ ಪ್ರದೇಶದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿ ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಕಳೆದ ರಾತ್ರಿ ನೌಗಾಮ್'ನ ವಗೂರಾ ಎಂಬ ಪ್ರದೇಶದಲ್ಲಿ ಸಿಐಎಸ್ಎಫ್'ನಲ್ಲಿ ಎಎಸ್ಐ ಅಧಿಕಾರಿ ರಾಜೇಶ್ ಕುಮಾರ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. 
ಕೂಡಲೇ ರಾಜೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 
ಯುವಕರ ಗುಂಪೊಂದು ನಡೆಸಿದ್ದ ಕಲ್ಲು ತೂರಾಟದಲ್ಲಿ ನಿನ್ನೆಯಷ್ಟೇ ಸೇನಾಯೋಧರೊಬ್ಬರು ಹುತಾತ್ಮರಾಗಿದ್ದರು. ಸರ್ಕಾರಿ ಸ್ವಾಮ್ಯದ ಬಾರ್ಡರ್ ರೋಡ್ ಆರ್ಗನೈಸೇಷನ್ (ಬಿಆರ್'ಒ) ಸಿಬ್ಬಂದಿಗೆ ಭದ್ರತೆ ನೀಡುತ್ತಿದ್ದ ಸೇನಾ ಯೋಧರ ಕ್ಷಿಪ್ರ ಕಾರ್ಯಾಚರಣೆ ಪಡೆಯಲ್ಲಿದ್ದ ಸಿಪಾಯಿ ರಾಜೇಂದ್ರ ಸಿಂಗ್ ಅವರು ಹುತಾತ್ಮರಾಗಿದ್ದಾರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com