ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಸಂಸತ್ ತುರ್ತು ಕಲಾಪವನ್ನು ನವೆಂಬರ್ 16ರ ವರೆಗೆ ಅಮಾನತುಗೊಳಿಸಿ ಆದೇಶ ನೀಡಿದ್ದರು. ಈ ಆದೇಶ ಪ್ರಕಟಿಸಿದ ಬೆನ್ನಲ್ಲೇ ಭಾರತೀಯ ವಿದೇಶಾಂಗ ಇಲಾಖೆ ಸಹ ಪ್ರತಿಕ್ರಿಯೆ ನೀಡಿದ್ದು, ಶ್ರೀಲಂಕಾ ರಾಜಕೀಯ ಬಿಕ್ಕಟ್ಟಿನ್ನು ಗಮನಿಸುತ್ತಿದ್ದೇವೆ, ಲಂಕಾ ಅಭಿವೃದ್ಧಿಗೆ ನೆರವು ಮುಂದುವರಿಕೆ ಮಾಡಲಾಗುತ್ತದೆ ಎಂದು ಹೇಳಿದೆ.