ಅಯೋಧ್ಯೆ ವಿವಾದ: 2019 ಜನವರಿಗೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಅಯೋಧ್ಯೆ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ ವಿಚಾರಣೆಯನ್ನು 2019ರ ಜನವರಿ ತಿಂಗಳಿಗೆ ಮುಂದೂಡಿದೆ ಎಂದು ಸೋಮವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ ವಿಚಾರಣೆಯನ್ನು 2019ರ ಜನವರಿ ತಿಂಗಳಿಗೆ ಮುಂದೂಡಿದೆ ಎಂದು ಸೋಮವಾರ ತಿಳಿದುಬಂದಿದೆ. 
2010ರಲ್ಲಿ ಅಲಹಾಬಾದ್ ಹೈಕೋರ್ಟ್ ರಾಮ ಜನ್ಮಭೂಮಿಯನ್ನು 3 ಭಾಗಗಳಾಗಿ ಹಂಚಿತ್ತು. ಇದನ್ನು ಪ್ರಶ್ನಿಸಿ ವಿವಿಧ ವರ್ಗಗಳ ಕಕ್ಷಿದಾರರು ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗೋಯ್, ನ್ಯಾ.ಸಂಜಯ್ ಕಿಶನ್ ಕೌಲ್ ಹಾಗೂ ನ್ಯಾ.ಕೆ.ಎಂ ಜೋಸೆಫ್ ಅವರ ತ್ರಿಸದಸ್ಯ ಪೀಠ ನಡೆಸಿದ್ದು, 2019ರ ಜನವರಿ ತಿಂಗಳಿಗೆ ವಿಚಾರಣೆಯನ್ನು ಮುಂದೂಡಿದೆ. 
2010ರಲ್ಲಿ ನೀಡಿದ್ದ ತೀರ್ಪಿನಲ್ಲಿ ವಿವಾದಿದ 2.77 ಎಕರೆ ಜಾಗವನ್ನು ಸನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮ್ ಲಲ್ಲಾಗೆ ಸಮನಾಗಿ ಹಂಚಿಕೆ ಮಾಡಲಾಗಿತ್ತು. 
ಇದಕ್ಕೂ ಮುನ್ನ ಸೆ.27ರಂದು ಮಸೀದಿ ಅವಿಬಾಜ್ಯ ಅಂಗವಲ್ಲ ಎಂಬ ತನ್ನ ಹಲೆಯ ತೀರ್ಪನ್ನು ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಪುನರುಚ್ಚರಿಸಿತ್ತು. ಅಲ್ಲದೆ, ಈ ಕುರಿತು ತೀರ್ಪನ್ನು 5 ಸದಸ್ಯರ ಸಾಂವಿಧಾನ ಪೀಠಕ್ಕೆ ವರ್ಗಾಯಿಸಲೂ ನಿರಾಗರಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com