ಬಿಹಾರ ಸೆಕ್ಸ್ ಹಗರಣ: ಬಿಹಾರ ಮಾಜಿ ಸಚಿವೆ ಮಂಜು ವರ್ಮಾ ಪತಿ ಕೋರ್ಟ್ ಗೆ ಶರಣು

ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಚಿವೆ ಮಂಜು ವರ್ಮಾ....
ಮಂಜು ವರ್ಮಾ
ಮಂಜು ವರ್ಮಾ
ಪಾಟ್ನಾ: ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಚಿವೆ ಮಂಜು ವರ್ಮಾ ಅವರ ಪತಿ ಚಂದ್ರಶೇಖರ್ ವರ್ಮಾ ಅವರು ಸೋಮವಾರ ಕೋರ್ಟ್ ಗೆ ಶರಣಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಚಂದ್ರಶೇಖರ್ ಅವರು ಇಂದು 
ಬೇಗುಸರಾಯಿ ಜಿಲ್ಲಾ ಕೋರ್ಟ್ ಗೆ ಇಂದು ಶರಣಾಗಿದ್ದಾರೆ.
ಸಿಬಿಐ ಶಸ್ತ್ರಾಸ್ತ್ರ ಕಾಯ್ದೆ ಅಡಿ ಚಂದ್ರಶೇಖರ್ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಮಾಜಿ ಸಚಿವೆಯ ಪತಿಯ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು.
ಈ ಮುಂಚೆ ಹೈಕೋರ್ಟ್ ಮತ್ತು ಸ್ಥಳೀಯ ಚಂದಶೇಖರ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೆ ಬಂಧನ ಭೀತಿ ಎದುರಿಸುತ್ತಿದ್ದ ಮಂಜು ವರ್ಮಾ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸಹ ಅಕ್ಟೋಬರ್ 9ರಂದು ಪಾಟ್ನಾ ಹೈಕೋರ್ಟ್ ವಜಾಗೊಳಿಸಿತ್ತು.
ಬಿಹಾರ ಸರ್ಕಾರ ಮುಜಾಫರಪುರ್ ಸೆಕ್ಸ್ ಹಗರಣವನ್ನು ಸಿಬಿಐಗೆ ವಹಿಸಿದ ನಂತ ಚಂದ್ರಶೇಖರ್ ವರ್ಮಾ ಅವರ ಪಾಟ್ನಾ ಮತ್ತು ಬೇಗುಸರಾಯಿ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು, ಮನೆಯಲ್ಲಿ 50 ಜೀವಂತ ಗುಂಡುಗಳನ್ನು ಜಪ್ತಿ ಮಾಡಿದ್ದರು.
ಮುಜಾಫರಪುರದ ಸರ್ಕಾರಿ ಆಶ್ರಯ ತಾಣದಲ್ಲಿದ್ದ 40 ಬಾಲಕಿಯರ ಪೈಕಿ 34 ಬಾಲಕಿಯರ ಮೇಲೆ ಅಲ್ಲಿನ ಸಿಬ್ಬಂದಿ, ಅದಿಕಾರಿಗಳು ಹಾಗೂ ರಾಜಕಾರಣಿಗಳು ನಿರಂತರ ಅತ್ಯಾಚಾರ ಎಸಗಿದ ಪ್ರಕರಣ ತನಿಖೆಯನ್ನು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಸಿಬಿಐಗೆ ಒಪ್ಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com