ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ಶ್ರೀನಿವಾಸ ಮೂರ್ತಿ ಎಂಬುವವರು 2 ಹಾಗೂ 5 ವರ್ಷದ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ 2 ವರ್ಷದ ಮಗು ಮೃತಪಟ್ಟಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀನಿವಾಸ್ ಮೂರ್ತಿ ಹಾಗೂ 5 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ.