ಸಿಬಿಐ ಆಂತರಿಕ ಕಲಹ: ಅಸ್ತಾನಾ ವಿರುದ್ಧ ದೂರು ನೀಡಿದ್ದ ಸತೀಶ್ ಸನಾಗೆ ಭದ್ರತೆ ನೀಡಲು ಸುಪ್ರೀಂ ಕೋರ್ಟ್ ಆದೇಶ

ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ಲಂಚ ಸ್ವೀಕಾರ ಆರೋಪ ಮಾಡಿದ ಉದ್ಯಮಿ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ಲಂಚ ಸ್ವೀಕಾರ ಆರೋಪ ಮಾಡಿದ ಉದ್ಯಮಿ ಸತೀಶ್ ಸನಾಗೆ ಸೂಕ್ತ ಭದ್ರತೆ ನೀಡುವಂತೆ ಹೈದರಾಬಾದ್ ಪೊಲೀಸರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ಕೆ ಎಂ ಜೋಸೆಫ್ ಅವರನ್ನೊಳಗೊಂಡ ನ್ಯಾಯಪೀಠ, ಸನಾ ವಿರುದ್ಧ ಸಿಬಿಐ ಸಮ್ಮನ್ಸ್ ಗೆ ತಡೆ ನೀಡಲು ನಿರಾಕರಿಸಿತು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಎ ಕೆ ಪಾಟ್ನಾಯಕ್ ಸಮ್ಮುಖದಲ್ಲಿ ತಮ್ಮ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಬೇಕೆಂಬ ಮನವಿಯನ್ನು ಸಹ ನ್ಯಾಯಪೀಠ ತಿರಸ್ಕರಿಸಿತು.

ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ಸನಾ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಇದಕ್ಕೆ ನಿನ್ನೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸನಾ ತಮಗೆ ರಕ್ಷಣೆ ನೀಡಬೇಕೆಂದು ಕೋರಿ ಮತ್ತು ತನಿಖೆಗೆ ಬರುವಂತೆ ಸಿಬಿಐ ಹೊರಡಿಸಿದ್ದ ಸಮ್ಮನ್ಸ್ ಗೆ ತಡೆ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com