ಸಿಬಿಐ ಲಂಚ ಪ್ರಕರಣ: ಕುಮಾರ್, ಮಧ್ಯವರ್ತಿಗೆ 14 ದಿನಗಳ ನ್ಯಾಯಾಂಗ ಬಂಧನ

ಇಲಾಖೆಯ ಡಿಎಸ್ ಪಿ ದೇವೇಂದ್ರ ಕುಮಾರ್ ಹಾಗೂ ಮಧ್ಯವರ್ತಿ ಮನೋಜ್ ಪ್ರಸಾದ್ ಅವರನ್ನು ದೆಹಲಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶ ನೀಡಿದೆ.
ಸಿಬಿಐ ಲಂಚ ಪ್ರಕರಣ: ಕುಮಾರ್, ಮಧ್ಯವರ್ತಿಗೆ 14 ದಿನಗಳ ನ್ಯಾಯಾಂಗ ಬಂಧನ
ಸಿಬಿಐ ಲಂಚ ಪ್ರಕರಣ: ಕುಮಾರ್, ಮಧ್ಯವರ್ತಿಗೆ 14 ದಿನಗಳ ನ್ಯಾಯಾಂಗ ಬಂಧನ
ನವದೆಹಲಿ: ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರೂ ಶಾಮೀಲಾಗಿದ್ದಾರೆ ಎನ್ನಲಾದ ಸಿಬಿಐ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಡಿಎಸ್ ಪಿ ದೇವೇಂದ್ರ ಕುಮಾರ್ ಹಾಗೂ ಮಧ್ಯವರ್ತಿ ಮನೋಜ್ ಪ್ರಸಾದ್ ಅವರನ್ನು ದೆಹಲಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶ ನೀಡಿದೆ. 
ಇಬ್ಬರೂ ಆರೋಪಿಗಳ ವಿಚಾಣೆ ಸಧ್ಯಕ್ಕೆ ಅಗತ್ಯವಿಲ್ಲ ಎಂದು ತನಿಖಾ ಸಂಸ್ಥೆ ಹೇಳಿದ್ದರಿಂದ ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.  ಇನ್ನು ಸಿಬಿಐ ಡಿಎಸ್ ಪಿ ದೇವೇಂದ್ರ ಕುಮಾರ್ ಅವರ ಜಾಮೀನು ಅರ್ಜಿ ವಿಚಾರಾಣೆಯನ್ನು ನಾಳೆ ಸಿಬಿಐ ನ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಸ್ನೇಹಿ ಮಾನ್ ವಿಚಾರಣೆ ನಡೆಸಲಿದ್ದಾರೆ. 
ತನಿಖಾ ಸಂಸ್ಥೆ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚುತ್ತಿದೆ ಎಂದು ವಿಚಾರಾಣೆ ವೇಳೆ ಕುಮಾರ್ ಆರೋಪಿಸಿದ್ದು ವಿಚಾರಣೆ ನಡೆಸುತ್ತಿರುವ ತನಿಖಾಧಿಕಾರಿಗಳ ವಿರುದ್ಧ ಕಳ್ಳತನ ಹಾಗೂ ಬೆದರಿಕೆ ಪ್ರಕರಣಗಳನ್ನು ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.  ಕುಮಾರ್ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೋರ್ಟ್ ಸಿಬಿಐ ಗೆ ಸೂಚಿಸಿದ್ದು, ಅ.31 ರಂದು ವಿಚಾರಣೆ ನಡೆಯಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com