ಮುಸ್ಲಿಂ, ಕ್ರಿಶ್ಚಿಯನ್ ಮಹಿಳೆಯರು ಶಬರಿಮಲೆ ಪ್ರವೇಶಿಸಲು ಯತ್ನಿಸಿದ್ದು ಪ್ರಚಾರಕ್ಕಾಗಿ: ಕೇಂದ್ರ ಸಚಿವ

ಮುಸ್ಲಿಂ, ಕ್ರಿಶ್ಚಿಯನ್ ಮಹಿಳೆಯರು ಕೇರಳದ ಶಬರಿಮಲೆ ದೇಗುಲ ಪ್ರವೇಶಿಸಲು ಯತ್ನಿಸಿದ್ದು ಕೇವಲ ಪ್ರಚಾರಕ್ಕಾಗಿ ಎಂದು ಕೇಂದ್ರ ಸಚಿವ ಕೆ.ಜೆ. ಅಲ್ಫೋನ್ಸ್ ಅವರು ಸೋಮವಾರ ಹೇಳಿದ್ದಾರೆ...
ಕೇಂದ್ರ ಸಚಿವ ಕೆ.ಜೆ. ಅಲ್ಫೋನ್ಸ್
ಕೇಂದ್ರ ಸಚಿವ ಕೆ.ಜೆ. ಅಲ್ಫೋನ್ಸ್
ನವದೆಹಲಿ: ಮುಸ್ಲಿಂ, ಕ್ರಿಶ್ಚಿಯನ್ ಮಹಿಳೆಯರು ಕೇರಳದ ಶಬರಿಮಲೆ ದೇಗುಲ ಪ್ರವೇಶಿಸಲು ಯತ್ನಿಸಿದ್ದು ಕೇವಲ ಪ್ರಚಾರಕ್ಕಾಗಿ ಎಂದು ಕೇಂದ್ರ ಸಚಿವ ಕೆ.ಜೆ. ಅಲ್ಫೋನ್ಸ್ ಅವರು ಸೋಮವಾರ ಹೇಳಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಲು ಯತ್ನಿಸಿದ್ದು ಅಯ್ಯಪ್ಪನ ಮೇಲಿನ ಭಕ್ತಿಯಿಂದಲ್ಲ, ಪ್ರಚಾರಕ್ಕಾಗಿ ಎಂದು ಹೇಳಿದ್ದಾರೆ. 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕುರಿತಂತೆ ಕೇರಳ ಮುಖ್ಯಮಂತ್ರಿಗಳು ನೀಡಿದ್ದ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಶಬರಿಮಲೆ ದೇಗುಲದ ಶಾಂತಿ ಹಾಳು ಮಾಡುತ್ತಿರುವವರು ಯಾರು? ಮಸೀದಿಗೆ ಹೋಗಲು ಸಾಧ್ಯವಾಗ ಮುಸ್ಲಿಂ ಮಹಿಳೆ ಶಬರಿಮಲೆ ದೇಗುಲ ಪ್ರವೇಶಿಸಲು ಯತ್ನಿಸುತ್ತಿದ್ದಾರೆ. ಅವರು ಏನನ್ನು ಸಾಧಿಸಲು ಹೊರಟಿದ್ದಾರೆ? ಮತ್ತೊಬ್ಬ ಕ್ರಿಶ್ಚಿಯನ್ ಯುವತಿಯಿದ್ದಾಳೆ. ಚರ್ಚ್'ಗೆ ಹೋಗದ ಆಕೆ ಕೇವಲ ಕ್ಯಾಮೆರಾಗಳಿಗಾಗಿ ಶಬರಿಮಲೆಗೆ ಹೋಗಲು ಯತ್ನಿಸಿದ್ದಾಳೆಂದು ತಿಳಿಸಿದ್ದಾರೆ. 
ಶಬರಿಮಲೆ ದೇಗುಲ ಪ್ರವೇಶಿಸಲು ಯತ್ನಿಸಿದ ಮಹಿಳೆಯರಿಗೆ ಟಿವಿಗಳಲ್ಲಿ 10 ಸೆಕೆಂಡ್ ಗಳ ಕಾಲಾವಕಾಶಬೇಕಿದೆಯಷ್ಟೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಕೇರಳ ರಾಜ್ಯದ ಜನತೆ ಅಯ್ಯಪ್ಪನ ಮೇಲೆ ಸಾಕಷ್ಟು ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಅದನ್ನು ಎಲ್ಲರೂ ಗೌರವಿಸಬೇಕು ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com