ಪಿ ಚಿದಂಬರಂ ಬಿಜೆಪಿ ಸೇರಲು ಯತ್ನಿಸಿದ್ದರು, ಆದರೆ ಅವರನ್ನು ತಿರಸ್ಕರಿಸಲಾಗಿತ್ತು: ಸುಬ್ರಮಣಿಯನ್ ಸ್ವಾಮಿ
ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅವರು ಬಿಜೆಪಿ ಸೇರಲು ಯತ್ನಿಸಿದ್ದರು ಎಂದು ಹೇಳುವ ಮೂಲಕ ಬಿಜೆಪಿ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
ಹೈದರಾಬಾದ್: ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅವರು ಬಿಜೆಪಿ ಸೇರಲು ಯತ್ನಿಸಿದ್ದರು ಎಂದು ಹೇಳುವ ಮೂಲಕ ಬಿಜೆಪಿ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
ಹೈದರಾಬಾದ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಿ ಚಿದಂಬರಂ ಹಲವು ಹಗರಣಗಳಲ್ಲಿ ಭಾಗಿಯಾಗಿದ್ದು, ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ನಾನಾ ಸರ್ಕಸ್ ಮಾಡುತ್ತಿದ್ದಾರೆ. ಅದರೆ ಅವರ ಜೈಲುವಾಸ ತಪ್ಪಿಸಿಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.
'ವಿವಿಧ ಹಗರಣಗಳಲ್ಲಿ ಪಾಲುದಾರರಾಗಿರುವ ಚಿದಂಬರಂ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ವಿವಿಧ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಚಿದಂಬರಂ ಜೈಲಿಗೆ ಹೋಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಅಂತೆಯೇ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಹ ಜೈಲು ಸೇರುವುದು ಖಚಿತ ಎಂದು ಸ್ವಾಮಿ ಹೇಳಿದ್ದಾರೆ.
ಪ್ರಸ್ತುತ ಸಿಬಿಐನಲ್ಲಿ ನಡೆಯುತ್ತಿರುವ ವಿವಾದ ಕುರಿತು ವರದಿಗಾರರ ಪ್ರಶ್ನೆಗೆ ಉತ್ತರಿಸಿರುವ ಸ್ವಾಮಿ, ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸಿಬಿಐ ಮತ್ತಷ್ಟು ಪ್ರಬಲವಾಗಿ ಎದ್ದು ನಿಲ್ಲಲಿದೆ ಎಂದು ಹೇಳಿದರು.