ದೆಹಲಿ ವಾಯುಗುಣಮಟ್ಟ ಕುಸಿತ: ಕಟ್ಟಡ ನಿರ್ಮಾಣ ಚಟುವಟಿಕೆಗಳು 10 ದಿನಗಳವರೆಗೆ ಸ್ಥಗಿತ

ದೆಹಲಿ ವಾಯುಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರರಾಜಧಾನಿಯಲ್ಲಿ 10 ದಿನಗಳ ವರೆಗೆ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ.
ದೆಹಲಿ ವಾಯುಗುಣಮಟ್ಟ ಕುಸಿತ: ಕಟ್ಟಡ ನಿರ್ಮಾಣ ಚಟುವಟಿಕೆಗಳು 10 ದಿನಗಳವರೆಗೆ ಸ್ಥಗಿತ
ದೆಹಲಿ ವಾಯುಗುಣಮಟ್ಟ ಕುಸಿತ: ಕಟ್ಟಡ ನಿರ್ಮಾಣ ಚಟುವಟಿಕೆಗಳು 10 ದಿನಗಳವರೆಗೆ ಸ್ಥಗಿತ
ನವದೆಹಲಿ: ದೆಹಲಿ ವಾಯುಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರರಾಜಧಾನಿಯಲ್ಲಿ 10 ದಿನಗಳ ವರೆಗೆ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ. 
ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಈ ಸೀಸನ್ ನಲ್ಲಿ ವಾಯುಗುಣಮಟ್ಟ ಕುಸಿತ ಕಂಡಿದ್ದು, ವಾತಾವರಣದಲ್ಲಿ ದಟ್ಟ ಹೊಗೆ ಆವರಿಸಿದ್ದು, ವಾಯುಗುಣಮಟ್ಟ ಸೂಚ್ಯಂಕ 2.5 ಪಿಎಂ ನಷ್ಟು ದಾಖಲಾಗಿದೆ. ವಾಯುಗುಣಮಟ್ಟವನ್ನು ಕಾಪಾಡಿಕೊಳ್ಳುವುದಕ್ಕಾಗಿ ನವೆಂಬರ್ 1 ರಿಂದ ಎಲ್ಲಾ ರೀತಿಯ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು 10 ದಿನಗಳ ವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.
ಇನ್ನು ಈ ನಡುವೆ ದೀಪಾವಳಿ ಹಬ್ಬವೂ ಇದ್ದು, ಪಟಾಕಿಗಳನ್ನು ಸಿಡಿಸಿದರೆ ಮತ್ತಷ್ಟು ವಾಯುಮಾಲಿನ್ಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಮುನ್ನೆಚ್ಚರಿಕಾ ಕ್ರಮವಾಗಿ ಕಟ್ಟಡ ನಿರ್ಮಾಣ, ಕಲ್ಲು ಪುಡಿಮಾಡುವ ಚಟುವಟಿಕೆ ಸೇರಿದಂತೆ ವಾಯುಮಾಲಿನ್ಯಕ್ಕೆ ಕಾರಣವಾಗುವ ಯಾವುದೇ ಚಟುವಟಿಕೆಗಳನ್ನೂ ಸ್ಥಗಿತಗೊಳಿಸಲು ಮುಂದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com