
ಚೆನ್ನೈ: ಎಎಂಎಂಕೆ ನಾಯಕ ಟಿಟಿವಿ ದಿನಕರನ್ ಬೆಂಬಲಿತ, ಅನರ್ಹಗೊಂಡ 18 ಶಾಸಕರು ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸದಿರಲು ನಿರ್ಧರಿಸಿದ್ದಾರೆ. ಆದರೆ ಉಪ ಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ.ಕಳೆದ ಒಂದು ವಾರದಿಂದ ಮದ್ರಾಸ್ ಹೈಕೋರ್ಟ್ ತೀರ್ಪು ಪ್ರಶ್ನಿಸುವುದೋ ಅಥವಾ ಚುನಾವಣೆಗೆ ಹೋಗುವುದು ಎಂಬ ಬಗ್ಗೆ ಗೊಂದಲದಲ್ಲಿದ್ದ ಅನರ್ಹಗೊಂಡ ಎಐಎಡಿಎಂಕೆ ಶಾಸಕರು, ಇಂದು ಅಂತಿಮವಾಗಿ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.ಇಂದು ಮಧುರೈನಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಟಿಟಿವಿ ದಿನಕರನ್, ಜನರ ಕೋರ್ಟ್ ಗೆ ಹೋಗುವುದಾಗಿ ಹೇಳಿದ್ದಾರೆ. ಅಲ್ಲದೆ ಉಪ ಚುನಾವಣೆಯಲ್ಲಿ ಆಡಳಿತರೂಢ ಎಐಎಡಿಎಂಕೆ ಅಭ್ಯರ್ಥಿಗಳ ಠೇವಣಿ ಸಹ ಕಳೆದುಕೊಳ್ಳಲಿದ್ದಾರೆ ಎಂದಿದ್ದಾರೆ.ಅನರ್ಹಗೊಂಡ ಶಾಸಕರು ಹೈಕೋರ್ಟ್ ತೀರ್ಪಿನ ನಂತರ 30 ದಿನದೊಳಗೆ ಸುಪ್ರೀಂ ಕೋರ್ಟ್ ಗೆ ಹೋಗದಿದ್ದರೆ ಉಪ ಚುನಾವಣೆ ನಡೆಸುವುದಾಗಿ ಮುಖ್ಯ ಚುನಾವಣಾ ಆಯುಕ್ತ ಒ ಪಿ ರಾವತ್ ಅವರು ಹೇಳಿದ್ದಾರೆ.
Advertisement